ಮತ್ತೆ 22 ತಾಲ್ಲೂಕುಗಳು ಪ್ರವಾಹ ಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ.

Promotion

ಬೆಂಗಳೂರು,ಆಗಸ್ಟ್,17,2021(www.justkannada.in):  ಮತ್ತೆ 22 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್. ಅಶೋಕ್, ರಾಜ್ಯ ಸರ್ಕಾರವು ಮತ್ತೆ 22 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗಿದ್ದು, ಬೆಳಗಾವಿ ಕೊಲ್ಹಾರ, ಸೂಪಾ, ಬಬಲೇಶ್ವರ, ಮೂಡಿಗೆರೆ, , ಚಿಕ್ಕಮಗಳೂರು, ತೆರಿಕೆರೆ, ಮುದ್ದೆಬಿಹಾಳ, ಹೊಸನಗರ ಸೇರಿದಂತೆ 22 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಶಾಸಕನ ಪ್ರತಿಭಟನೆಗೆ ಮಣಿದ ಸರ್ಕಾರ

ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ನೆರೆ ಪರಿಹಾರದಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧವೇ ವಿಧಾನಸೌಧದ ಎದುರು ಏಕಾಂಕಿ ಪ್ರತಿಭಟನೆ ನಡೆಸಿದ್ದರು. ಇದೀಗ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ  ಮೂಡಿಗೆರೆಯನ್ನ ಪ್ರವಾಹಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಿದೆ.

Key words: Again – state government- declared- 22 taluks – flood area-minister -R.Ashok