ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿದ್ರೂ ಜನಶಕ್ತಿ ಎದುರು ಮಣಿಯಲೇಬೇಕು: ಇದುವೇ ರೈತರ ಸ್ವಾತಂತ್ರೋತ್ಸವ- ಸಿದ್ಧರಾಮಯ್ಯ ಟ್ವಿಟ್.

Promotion

ಬೆಂಗಳೂರು,ನವೆಂಬರ್,19,2021(www.justkannada.in): ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿರುವ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಸರಣಿ ಟ್ವಿಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಜೈಕಿಸಾನ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಕೃಷಿ ಕಾಯ್ದೆ ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು  ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಸರ್ಕಾರಕ್ಕೆ ಕುಟುಕಿರುವ ಸಿದ್ಧರಾಮಯ್ಯ, ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು, ಇದುವೇ ರೈತರ ಸ್ವಾತಂತ್ರೋತ್ಸವ ಎಂದಿದ್ದಾರೆ.

ಕೃಷಿ ಕಾಯ್ದೆ ಅಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರೆಯಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನತೆ ಅಣಿಯಾಗಿದ್ದಾರೆ ಎಂದು ಸಿದ್ಧರಾಮಯ್ಯ ತಿಳಿಸಿದ್ಧಾರೆ.

Key words: Agricultural Amendment Act – back-Farmers’- Independence Day-Former CM -Siddaramaiah

ENGLISH SUMMARY…

However strong a dictator may be, he has to bend down in front of the farmers: This is farmers independence – former CM Siddaramaiah tweets
Bengaluru, November 19, 2021 (www.justkannada.in): Yielding to the pressure by the protesting farmers, the Union Government has withdrawn three amended agriculture policies.
In his response to this development, the former Chief Minister Siddaramaiah, in his tweet, has mentioned that it is a significant victory for the farmers who were fighting against the Centre for a long time against the amended agriculture laws. “It is a victory of the farmers, congratulations. Jai Kisan,” his tweet read.
Further, his tweet mentioned that it is not enough only if the amended agriculture policies are withdrawn, but the center should also provide a sum of Rs. 25 lakh compensation each to the families of the farmers who lost their lives in this struggle.
“However strong a dictator may be, however bigger chest he might have, he has to bend in front of the strength of the people. It is the beauty of democracy, it is farmers’ independence,” he sarcastically mentioned the PM Modi.
Keywords: Union Government/ agriculture laws/ withdrawal/ former CM Siddaramaiah/ tweet