ಮಸೂದೆ ಬಗ್ಗೆ ಅಪಪ್ರಚಾರದಿಂದಾಗಿ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್- ಶಾಸಕ ಎಸ್.ಎ ರಾಮದಾಸ್

ಮೈಸೂರು,ನವೆಂಬರ್,19,2021(www.justkannada.in): ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದ ರೈತರ ಆಕ್ರೋಶಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆದಿದ್ದು ಈ ಕುರಿತು ರಾಜಕೀಯ ನಾಯಕರು, ರೈತನಾಯಕರು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೇಂದ್ರದ ಈ ನಿರ್ಧಾರದ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಶಾಸಕ ಎಸ್.ಎ ರಾಮದಾಸ್, ಕೃಷಿ ಮಸೂದೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಇರಲಿಲ್ಲ. ರೈತನಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿತ್ತು, ಎಲ್ಲಿ ಬೇಕಾದರೂ ಮಾರಾಟ ಮಾಡುವ ಅವಕಾಶ ಇತ್ತು. ಮೂರು ಮಸೂದೆಗಳನ್ನ ಅರ್ಥ ಮಾಡಿಕೊಳ್ಳಬೇಕಾಗಿತ್ತು. ಮಸೂದೆಗಳ ಬಗ್ಗೆ ಕೆಟ್ಟದಾಗಿ ಅಪಪ್ರಚಾರ ಮಾಡಲಾಯಿತು. ಹಾಗಾಗಿ ಕೇಂದ್ರ ಸರ್ಕಾರ ಮಸೂದೆಗಳ ವಾಪಸ್ಸ್ ಪಡೆದುಕೊಂಡಿದೆ ಎಂದು ತಿಳಿಸಿದ್ದಾರೆ.

Key words: Agricultural Amendment Act – withdraw-MLA- SA Ramadas-mysore