“ಕೃಷಿ ಮಸೂದೆ ವಿರೋಧಿಸಿ ರೈತ ಸಂಘಟನೆಗಳಿಂದ ಅಣಕು ಶವಯಾತ್ರೆ”

kannada t-shirts

ಮೈಸೂರು,ಮಾರ್ಚ್,26,2021(www.justkannada.in)  : ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ವಿರೋಧಿಸಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ರಾಜ್ಯ ರೈತ ಸಂಘಟನೆಗಳು ಬೆಂಬಲ ನೀಡಿ ಅಣಕು ಶವಯಾತ್ರೆ ನಡೆಸಿದವು.jkಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ವಿವಿಧ ರೈತ ಸಂಘಟನೆಗಳು ನೀಡಿದ ಭಾರತ್ ಬಂದ್ ಗೆ ಬೆಂಬಲ ಸೂಚಿಸಿ, ಶುಕ್ರವಾರ ಸಾಮೂಹಿಕ ನಾಯಕತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ನಗರದ ಗನ್ ಹೌಸ್ ಬಳಿ  ಕೃಷಿ ಕಾಯ್ದೆಗಳ ಅಣುಕು ಶವಯಾತ್ರೆ ನಡೆಸಿ ಪ್ರತಿಭಟಿಸಿದರು.

ದೆಹಲಿಯಲ್ಲಿ ಕಳೆದ ನಾಲ್ಕು ತಿಂಗಳಿಂದಲೂ ಕೃಷಿ ಮಸೂದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ ಇದುವರೆಗೂ ರೈತರ ಪರವಾಗಿ ದನಿ ಎತ್ತಿಲ್ಲ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ತೀವ್ರವಾಗಿ ಖಂಡಿಸಿದ ಅವರು ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿವೆ. ಈ ಕಾಯ್ದೆಗಳ ಮೂಲಕ ದೇಶದ ರೈತಾಪಿ ಕೃಷಿಯನ್ನು ನಾಶ ಮಾಡಿ ಕಂಪನಿ ಕೃಷಿಯನ್ನು ಜಾರಿಗೆ ತರುತ್ತಿರುವುದು ಮಾತ್ರವಲ್ಲದೆ ಸಾರ್ವಜನಿಕ ಕ್ಷೇತ್ರವನ್ನು ಕೇಂದ್ರ ಸರ್ಕಾರ ಕಾರ್ಪೋರೇಟ್ ಕಂಪೆನಿಗಳಿಗೆ ಧಾರೆ ಎರೆಯುತ್ತಿದೆ ಎಂದು ಆರೋಪಿಸಿದರು.

ಕಳೆದ ನಾಲ್ಕು ತಿಂಗಳಿಂದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಯುತ್ತಿದೆ. ರೈತರ ಸಮಸ್ಯೆ ಇತ್ಯರ್ಥಪಡಿಸಲು ಕೇಂದ್ರ ಸರ್ಕಾರ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಅದಕ್ಕಾಗಿ ಇಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್‍ ಗೆ ಕರೆ ನೀಡಿದ್ದು, ನಾವಿಲ್ಲಿ ಅಣಕು ಶವಯಾತ್ರೆ ನಡೆಸಿದ್ದೇವೆ ಎಂದರು.

ರೈತಾಪಿ ಜನರ ಕೃಷಿ ಉಳಿಸುವ, ದೇಶದ ಆಸ್ತಿಗಳಾದ ಸಾರ್ವಜನಿಕ ಉದ್ದಿಮೆಗಳನ್ನು ರಕ್ಷಿಸುವ ಉದ್ದೇಶದಿಂದ ನಾವೆಲ್ಲ ಹೋರಾಟ ಮಾಡುವ  ಅಗತ್ಯವಿದೆ. ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಭಾವನಾತ್ಮಕ ವಿಷಯಗಳ ಮೂಲಕ ಸರ್ಕಾರ ಪ್ರಯತ್ನಿಸುತ್ತಿದೆ. ನಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದರು.

ರಾಕೇಶ್ ಟಿಕಾಯತ್ ಮೇಲೆ ರಾಜಕೀಯ ದುರಿದ್ದೇಶದಿಂದ ಎಫ್ ಐ ಆರ್ ದಾಖಲಿಸಲಾಗಿದೆ. ಇದು ಹೋರಾಟವನ್ನು ಹತ್ತಿಕ್ಕುವ ಕೆಲಸ. ಕೂಡಲೇ ಅವರ ಮೇಲೆ ಹಾಕಿರುವ ಎಫ್ ಐ ಆರ್ ನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.Agricultural-Bill-Oppose-farmer-organizations-Mock-Funeral ಪ್ರತಿಭಟನೆಯಲ್ಲಿ ಹೊಸೂರು ಕುಮಾರ್, ಹೊಸಕೋಟೆ ಬಸವರಾಜು, ಕೆ.ಎಸ್.ಶಿವರಾಮು ಸೇರಿದಂತೆ ಹಲವರು ಭಾಗವಹಿಸಿದ್ದರು.

key words : Agricultural-Bill-Oppose-farmer-organizations-Mock-Funeral

website developers in mysore