ಕೃಷಿ ಅಧಿಕಾರಿಗಳು ರೈತಸ್ನೇಹಿಗಳಾಗಬೇಕೆ ಹೊರತು ವ್ಯಾಪಾರಿ ಸ್ನೇಹಿಯಲ್ಲ : ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,ಸೆಪ್ಟೆಂಬರ್, 10, 2020(www.justkannada.in) : ಕೃಷಿ ಅಧಿಕಾರಿಗಳು ರೈತಸ್ನೇಹಿಗಳಾಗಬೇಕೆ ಹೊರತು ವ್ಯಾಪಾರಿಸ್ನೇಹಿಗಳಲ್ಲ. ರೈತರಿಗೆ ಅಧಿಕಾರಿಗಳು ಸ್ಥಳೀಯವಾಗಿ ಸಿಗುವಂತಾಗಬೇಕು‌. ರೈತರೇ ಉತ್ತಮ ಅಧಿಕಾರಿ ಎಂದು ಮೆಚ್ಚುಗೆ ವ್ಯಕ್ತಪಡಿಸುವಂತಾಗಬೇಕು‌ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

jk-logo-justkannada-logo

ಬೆಂಗಳೂರಿನ ಜಿಕೆವಿಕೆಯ ಕುವೆಂಪು ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕೃಷಿ ಅಧಿಕಾರಿಗಳ ಜೊತೆ ಪ್ರಗತಿಪರಿಶೀಲನಾ ಸಭೆ ನಡೆಸಿ ಮಾತನಾಡಿದರು.

ಕೃಷಿ ಇಲಾಖೆಯ ಅಭಿವೃದ್ಧಿಗೆ ರೈತರಿಗೆ ಅನುಕೂಲ ಕಲ್ಪಿಸಲು ಅಧಿಕಾರಿಗಳು ಯೋಜನೆಗಳನ್ನು ರೂಪಿಸಬೇಕು. ಅಧಿಕಾರಿಗಳು ರೈತರ ಅಭಿವೃದ್ಧಿಗಾಗಿ ನೀಡುವ ಸಲಹೆಗಳನ್ನು ಸ್ವೀಕರಿಸಲಾಗುವುದು. ಈ ಬಾರಿ 101% ಬಿತ್ತನೆಯಾಗಿರುವುದು ಇಲಾಖೆಯ ಸಾಧನೆಯಾಗಿದೆ ಎಂದರು.

Agriculture-officers-should-farmers-friendly-business-friendly-Minister B.C. Patil

ಮುಂದಿನ ವರ್ಷದಿಂದ ರೈತರೇ ತಮ್ಮ ಬೆಳೆ ಸಮೀಕ್ಷೆ ಮಾಡಬೇಕು 

ರೈತರೇ ಮುಂದಿನ ವರ್ಷದಿಂದ ತಮ್ಮ ಬೆಳೆಯ ಸಮೀಕ್ಷೆಯನ್ನು ತಾವೇ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈ ವರ್ಷದಲ್ಲಿ ಬೆಳೆ ಸಮೀಕ್ಷೆಗೆ ಪ್ರಾಯೋಗಿಕ ಕೆಲಸ ಮಾಡಲಾಗಿದೆ. ಕೆಲವೆಡೆ ತಂತ್ರಜ್ಞಾನದಿಂದ, ಮಳೆಯಿಂದ ಸಮೀಕ್ಷೆ ತೊಂದರೆಯಾಗಿರಬಹುದಷ್ಟೇ. ಆದರೆ, ಪ್ರಾಯೋಗಿಕತೆ ಯಶಸ್ವಿಯಾಗುತ್ತಿದೆ. ಬೆಳೆ ಸಮೀಕ್ಷೆಗೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಲೇಬೇಕು. ಸರ್ಕಾರದ ಸೌಲಭ್ಯಗಳಿಗೆ ರೈತರು ತಪ್ಪದೇ ಆ್ಯಪ್ ಬೆಳೆ ಸಮೀಕ್ಷೆ ಮಾಡಬೇಕು.ಅಧಿಕಾರಿಗಳು ಇನ್ನಷ್ಟು ಹೆಚ್ಚು ಶ್ರಮ ಮತ್ತು ಆಸಕ್ತಿವಹಿಸಿ ಬೆಳೆ ಸಮೀಕ್ಷೆ ಮಾಡಿಸಬೇಕು ಎಂದು ಸಚಿವರು ಕರೆ ನೀಡಿದರು.

ರೈತರಿಗೆ ಇಲಾಖೆಯ ಅಭಿವೃದ್ಧಿಗಳ ಮಾಹಿತಿ ನೀಡಿ 

Agriculture-officers-should-farmers-friendly-business-friendly-Minister B.C. Patil

ಕೃಷಿ ಇಲಾಖೆಗೆ ಎಲ್ಲರೂ ಪ್ರೋತ್ಸಾಹ ನೀಡುತ್ತಿದ್ದಾರೆ. ಪ್ರಧಾನಿಗಳು ಸಹ ಆಹಾರ ಉತ್ಪಾದನೆ ಕೃಷಿಗೆ ಹೆಚ್ಚು ಒತ್ತು ನೀಡಿ ಅನುದಾನ ನೀಡುತ್ತಿದ್ದಾರೆ . ನಮ್ಮ‌ಇಲಾಖೆಯ ಕೆಲಸ ನಾವೇ ಮಾಡಬೇಕು. ಅಧಿಕಾರಿಗಳು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇಲಾಖೆಯ ಅಭಿವೃದ್ಧಿಗಳ ಮಾಹಿತಿಗಳನ್ನು‌ ನೀಡಬೇಕು ಎಂದು ತಿಳಿಸಿದರು.

ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ಮಾತನಾಡಿ, ರಾಜ್ಯದಲ್ಲಿ ನಿಜಕ್ಕೂ ಯೂರಿಯಾ, ರಸಗೊಬ್ಬರಕ್ಕೆ ಕೊರತೆಯಿಲ್ಲ. ಸರಬರಾಜು ಹಂಚಿಕೆಯಲ್ಲಿ ಎಲ್ಲೋ‌ ಒಂದೆರಡು ಕಡೆ ವಿಳಂಬವಾಗಿರಬಹುದಷ್ಟೇ. ಆದರೆ, ವಾಸ್ತವವಾಗಿ ಕೊರತೆಯಿಲ್ಲ. ಕಾಳಸಂತೆ ಮಾರಾಟ ಸುಳ್ಳು. ತಪ್ಪು ಮಾಹಿತಿ ನೀಡುವವರ ವಿರುದ್ಧ ಎಚ್ಚರಿಕೆ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಉಪಸ್ಥಿತರಿದ್ದರು.

key words : Agriculture-officers-should-farmers-friendly-business-friendly-Minister B.C. Patil