ನವದೆಹಲಿ,ಸೆಪ್ಟಂಬರ್,30,2022(www.justkannada.in): ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಸ್ಪರ್ಧೆಗಿಳಿದಿದ್ದಾರೆ.![]()
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕಿಂತ ಮುನ್ನ ಶಶಿ ತರೂರ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ , ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.
ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಕಣದಲ್ಲಿ ಯಾರು ಉಳಿಯುತ್ತಾರೆ ಎಂಬುವುದನ್ನು ಕಾದು ನೋಡಬೇಕಿದೆ. ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಶಶಿತರೂರ್ ಸ್ಪಷ್ಟಪಡಿಸಿದ್ದಾರೆ.
ಈ ಮೊದಲು ಅಧ್ಯಕ್ಷೀಯ ಸ್ಥಾನದ ಚುನಾವಣೆಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್ ಹೆಸರು ಕೇಳಿ ಬಂದಿದ್ದವು. ಆದರೆ, ಈ ಇಬ್ಬರು ನಾಯಕರು ಕಡೇ ಕ್ಷಣದಲ್ಲಿ ಹಿಂದೆ ಸರಿದರು.
Key words: AICC-President –Election-Mallikarjuna Kharge-filed -nomination







