ಜಾಗೃತಿ, ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಏಡ್ಸ್ ತಡೆಗಟ್ಟಿ-  ಸಚಿವ ಡಾ.ಕೆ.ಸುಧಾಕರ್…

kannada t-shirts

ಬೆಂಗಳೂರು, ಡಿಸೆಂಬರ್ 1,2020(www.justkannada.in): ಮುನ್ನೆಚ್ಚರಿಕೆ ಕ್ರಮ, ಜಾಗೃತಿ ಕಾರ್ಯಕ್ರಮಗಳ ಮೂಲಕ ಎಚ್‍ಐವಿ ಸೋಂಕು ಹರಡುವುದನ್ನು ತಡೆಗಟ್ಟಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.aids-prevented-awareness-precautions-minister-dr-k-sudhakar

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ  ಸಚಿವ ಡಾ.ಕೆ.ಸುಧಾಕರ್, ಜಾಗತಿಕ ಒಗ್ಗಟ್ಟು, ಜವಾಬ್ದಾರಿಯ ಹಂಚಿಕೆಯೊಂದಿಗೆ ಏಡ್ಸ್ ನಿಯಂತ್ರಣಕ್ಕೆ ತರಬೇಕು ಎಂದು ಈ ಬಾರಿ ಘೋಷಿಸಲಾಗಿದೆ. ಎಚ್ ಐವಿಗೊಳಗಾದವರು ಮಾನಸಿಕ ಖಿನ್ನತೆಗೆ ಒಳಗಾಗಿರುತ್ತಾರೆ. ಕೋವಿಡ್ ಬಂದಾಗ, ‘ರೋಗದ ವಿರುದ್ಧ ಹೋರಾಡಬೇಕೆ ಹೊರತು ರೋಗಿಯ ವಿರುದ್ಧ ಅಲ್ಲ’ ಎಂಬ ಸಂದೇಶ ನೀಡಲಾಯಿತು. ಈ ಸಂದೇಶ ಎಲ್ಲ ರೋಗಗಳಿಗೂ ಅನ್ವಯವಾಗುತ್ತದೆ. ಏಡ್ಸ್ ರೋಗಿಗಳನ್ನು ಅವಮಾನಕಾರಿಯಾಗಿ ನೋಡಬಾರದು ಎಂದರು.

ಉತ್ತಮ ಆರೋಗ್ಯ ಸೌಲಭ್ಯಗಳು ಇರುವುದರಿಂದ ಏಡ್ಸ್ ಪ್ರಕರಣಗಳಲ್ಲಿ ಸಾವಿನ ಪ್ರಮಾಣ ಕಡಿಮೆಯಾಗಿದೆ. 99 ವರ್ಷದ ಎಚ್ ಐವಿ ಸೋಂಕಿತರು ಕೂಡ ಜೀವಂತವಾಗಿ ಆರೋಗ್ಯದಿಂದಿದ್ದಾರೆ. ಆ ಮಟ್ಟಿಗೆ ಆರೋಗ್ಯ ಸೌಲಭ್ಯಗಳಿವೆ. ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ಮೂಲಕ ಉಚಿತ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ ಎಂದರು.

ಎಚ್ ಐವಿ ಸೋಂಕಿತರಿಗೆ ಕೋವಿಡ್ ಕೂಡ ಬಂದರೆ ಕಷ್ಟ ಎಂದು ಮೊದಲಿಗೆ ಭಯವಾಗಿತ್ತು. ರಾಜ್ಯದಲ್ಲಿ 280 ಎಚ್ ಐವಿ ಸೋಂಕಿತರು ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಪೈಕಿ 275 ಮಂದಿ ಜೀವಂತವಾಗಿದ್ದು, ಅವರ ಆರೋಗ್ಯ ಸುರಕ್ಷಿತವಾಗಿದೆ ಎಂದರು.aids-prevented-awareness-precautions-minister-dr-k-sudhakar

ಎಚ್‍ಐವಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುದಾನ ನೀಡಲಾಗುತ್ತಿದೆ. ಅವರಿಗೆ ವಾರ್ಷಿಕ 5 ಲಕ್ಷ ರೂ.ವರೆಗೆ ಉಚಿತ ಔಷಧಿ ನೀಡಬೇಕು ಎಂದು ಆರೋಗ್ಯ ಕೇಂದ್ರಗಳಿಗೆ ಸೂಚಿಸಲಾಗಿದೆ. ಎಪಿಎಲ್ ಹಾಗೂ ಬಿಪಿಎಲ್ ರೋಗಿಗಳಿಗೆ ಇದು ಅನ್ವಯವಾಗಲಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

Key words: AIDS – prevented -awareness –precautions- Minister- Dr. K. Sudhakar.

website developers in mysore