ರಾಷ್ಟ್ರದಲ್ಲೇ ಕರ್ನಾಟಕವನ್ನು ಮಾದರಿ ರಾಜ್ಯವಾಗಿ ಮಾಡುವ ಗುರಿ- ಸಿಎಂ ಬಿ.ಎಸ್. ಯಡಿಯೂರಪ್ಪ

Promotion

ಬೀದರ ಜನವರಿ,6,2021(www.justkannada.in): ಸರ್ವಾಂಗೀಣ ಅಭಿವೃದ್ಧಿಗೆ ಕಾರ್ಯಕ್ರಮ ಹಾಕಿಕೊಂಡು,ಕರ್ನಾಟಕವನ್ನು ರಾಷ್ಟ್ರದಲ್ಲೇ ಮಾದರಿ ರಾಜ್ಯವಾಗಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.bidar-basava-kalyana-anubava-mantapa-writer-go-ru-channabasappa

ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಜನವರಿ 6ರಂದು ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ಶಂಕುಸ್ಥಾಪನೆ  ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಇದು ಪೂರ್ವಜನ್ಮದ ಪುಣ್ಯ ಕಾರ್ಯ ಎಂದು ತಿಳಿಸಿದರು. ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ ಬಿಡುಗಡೆ ಮಾಡಿದ್ದು, ಇನ್ನು 100 ಕೋಟಿ ರೂಗಳನ್ನು ವಾರದೊಳಗೆ ಬಿಡುಗಡೆ ಮಾಡಿ, ಟೆಂಡರ್ ಪ್ರಕ್ರಿಯೆ ಪೂರ್ಣವಾದ ಕೂಡಲೇ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದರು. aim - Karnataka - model state - country - CM BS Yeddyurappa-bidar- anubhava mantapa

ಕರ್ನಾಟಕ ಇತಿಹಾಸದಲ್ಲಿ ಇಂದು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ ಎಂದ ಅವರು, ಸಾಧನೆ ಮಾತನಾಡಬೇಕು. ಮಾತಾಡುವುದು ಸಾಧನೆಯಾಗಬಾರದು ಎನ್ನುವುದು ತಮ್ಮ ಮನೋಭಾವವಾಗಿದೆ. ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಅಂತೆಯೇ ಎರಡು ವರ್ಷದೊಳಗೆ ಅನುಭವ ಮಂಟಪ ನಿರ್ಮಿಸಿ, ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳಿಸಲಾಗುವುದು ಎಂದು ತಿಳಿಸಿದರು.

20 ಕೋಟಿ ರೂಪಾಯಿ ವೆಚ್ಚದಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಹಾಗೂ ಕಾಮಗಾರಿಗಳ ಉದ್ಘಾಟನೆ…..

ಬೀದರ್ ನಗರದಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ೧೦೦ ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ಹಾಗೂ ಇನ್ನಿತರ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ  ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೋವಿಡ್, ಪ್ರವಾಹ, ಅತಿವೃಷ್ಟಿ, ಹಣಕಾಸಿನ ಸಮಸ್ಯೆಗಳಿಂದ ಈ ವರ್ಷ ನಿರೀಕ್ಷೆಯಂತೆ ಗುರಿಮುಟ್ಟಲಾಗಿಲ್ಲ. ಮುಂದಿನ ದಿನಗಳಲ್ಲಿ ಬೀದರ್ ಜಿಲ್ಲೆ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ರಾಜ್ಯ ಸರ್ಕಾರ ಎಲ್ಲರಿಗೂ ಆರೋಗ್ಯ ಸೇವೆ ನೀಡಲು ಬದ್ಧವಾಗಿದ್ದು, ಮುಂದಿನ ೫ ವರ್ಷದಲ್ಲಿ ರಾಜ್ಯ ಸರ್ಕಾರ ೧೨೫ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆ ತೆರೆಯುವ ಗುರಿ ಹೊಂದಿದೆ ಎಂದು ಅವರು ಘೋಷಿಸಿದರು.

ಇದೀಗ ಉದ್ಘಾಟನೆಗೊಂಡಿರುವ ನೂರು ಹಾಸಿಗೆಗಳ ಆಸ್ಪತ್ರೆ ಅತ್ಯಾಧುನಿಕ ಆಸ್ಪತ್ರೆಯಾಗಿದ್ದು, 24 ಗಂಟೆಯೂ ತಾಯಿ ಮತ್ತು ಮಕ್ಕಳ ಆರೈಕೆ ಮಾಡುತ್ತದೆ.ಈ ನಿಟ್ಟಿನಲ್ಲಿ ಪರಿಣಿತ ವೈದ್ಯರ ತಂಡ ಈ ಆಸ್ಪತ್ರೆಯಲ್ಲಿದೆ ಎಂದು ಮೆಚ್ಚುಗೆಯ ಮಾತನಾಡಿದರು.

ಗರ್ಭಿಣಿ ಮತ್ತು ನವಜಾತ ಶಿಶುಗಳ ಮರಣಗಳ ಅನುಪಾತ ತಗ್ಗಿಸುವುದು ಹಾಗೂ ಗರ್ಭಿಣಿ ಹಾಗೂ ಮಕ್ಕಳಿಗೆ ಉತ್ತಮ ಗುಣಮಟ್ಟದ ಸೇವೆ ನೀಡಬೇಕೆಂಬುದು ಎಲ್ಲರ ಆಶಯವಾಗಿದೆ.  ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಕರೆ ನೀಡಿದರು.Mother,Child care,Hospital,Works,CM B.S.Yeddyurappa,Inauguration ...!

2018ರ ನೀತಿ ಆಯೋಗದ ಶ್ರೇಯಾಂಕದ ಪ್ರಕಾರ ಕೇರಳ ಮತ್ತು ತಮಿಳುನಾಡು ಬಿಟ್ಟರೆ ಕರ್ನಾಟಕ ಅತ್ಯುತ್ತಮ ಆರೋಗ್ಯ ಸೇವೆ ನೀಡುವ ರಾಜ್ಯ ಎಂದು ಹೆಮ್ಮೆಯಿಂದ ನುಡಿದರು. ದೇಶದ ಆರೋಗ್ಯ ಕ್ಷೇತ್ರದ ಸರಾಸರಿ ಅಂಕಕ್ಕಿAತ ರಾಜ್ಯದ ಸರಾಸರಿ ಅಂಕ ಹೆಚ್ಚಿದೆ ಎಂದು ಅವರು ಹೇಳಿದರು.

ಇಲ್ಲಿ ಜನಿಸಿದ ಶರಣ ಸಂಸ್ಕೃತಿಯೂ ಇಡೀ ವಿಶ್ವಕ್ಕೆ ಪಸರಿಸಿ ಈ ನೆಲದ ಮಹತ್ವ ಸಾರಿದೆ ಎಂದು ಬಣ್ಣಿಸುವ ಮೂಲಕ ಶರಣರು-ಸಂತರನ್ನು ಹಾಡಿಹೊಗಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಮಾತನಾಡಿ, ಇಂದು ಖಾಸಗಿ ಆಸ್ಪತ್ರೆಗಳು ಬಡವರಿಗೆ ತುಟ್ಟಿಯಾಗಿ ಪರಿಣಮಿಸಿವೆ. ಪರಿಣಿತವೈದ್ಯರನ್ನೊಳಗೊಂಡಿರುವ ತಾಯಿ  ಮತ್ತು ಮಕ್ಕಳ ಆಸ್ಪತ್ರೆ ಬಡವರಿಗೆ ಪೂರಕವಾಗಿದೆ ಎಂದು ಅವರು ಹೇಳಿದರು.

೨೦೦೮ರಲ್ಲಿ ಅಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ೨೦ ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಇಂದು ಅವರೇ ಉದ್ಘಾಟಿಸುತಿರುವುದು ಸಂತಸ ತಂದಿದೆ ಎಂದರು.

ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಇಲಾಖೆಗೆ ೨೫೦೦ ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ಮುಂದಿನ ೧೫ ದಿನಗಳಲ್ಲಿ ಪ್ರಕ್ರಿಯೆ ಮುಗಿಯಲಿದೆ ಎಂದು ಅವರು ತಿಳಿಸಿದರು.

ಇತರೆ ಕಾಮಗಾರಿಗಳು: ೫.೨೨ ಕೋಟಿ ರೂಪಾಯಿ ವೆಚ್ಚದಲ್ಲಿ ಬೀದರ್ ಇಂಜಿನಿಯರಿAಗ್ ಕಾಲೇಜು ಹಾಸ್ಟೆಲ್, ೪.೯೦ ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಶೂಶ್ರುಷ ಶಾಲೆ, ಕಾಲೇಜು ಕಟ್ಟಡ ಹಾಗೂ ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಾಣ, ೨.೫೦ ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರಾಮೀಣ ಸಂತೆಗಳ ಅಭಿವೃದ್ಧಿ ( ಮನ್ನಳ್ಳಿ, ಕಮಠಾಣಾ ಹಾಗೂ ಬೆನಕನಹಳ್ಳಿ) ಕಾಮಗಾರಿಗಳ ಲೋಕಾರ್ಪಣೆ ಸಹ ಈ ಸಂದರ್ಭದಲ್ಲಿ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಬೀದರ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಜಮೀಸ್ಥಾನಪುರ ಉಪಪ್ರಾಂಗಣದಲ್ಲಿ ಹಮಾಲರಿಗೆ ಮನೆ ನಿರ್ಮಾಣಕ್ಕಾಗಿ ನಿವೇಶನದ ಹಕ್ಕುಪತ್ರಗಳನ್ನು ಮುಖ್ಯಮಂತ್ರಿಗಳು ವಿತರಿಸಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷಣ ಸಂಗಪ್ಪ ಸವದಿ, ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ. ಚವ್ಹಾಣ್, ಸಂಸದ ಭಗವಂತ ಖೂಬಾ, ಜಿಲ್ಲಾ ಪಂಚಾಯತ್ ಅಧ್ಯಕ್ಷ ನಿರ್ಮಲಾ ವೈಜನಾಥ್ ಮಾನೆಗೋಪಾಳೆ, ವಿಧಾನ ಪರಿಷತ್ ಸದಸ್ಯ ರಘುನಾಥ್‌ರವ್ ಮಲ್ಕಾಪೂರೆ, ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಬೀದರ್ ಶಾಸಕ ರಹೀಮ್ ಖಾನ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ವಿಜಯಕುಮಾರ್ ಅಣಿಪ್ಪಾ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ, ಅಪರ ಜಿಲ್ಲಾಧಿಕಾರಿ ರುದ್ರೇಶ್ ಘಾಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿ.ಜಿ. ರೆಡ್ಡಿ ಮುಂತಾದವರು ಹಾಜರಿದ್ದರು.

Key words:  aim – Karnataka – model state – country – CM BS Yeddyurappa-bidar- anubhava mantapa