ಉತ್ತರ ಪ್ರದೇಶದಲ್ಲಿ ಅಕ್ಷಯ್ ಕುಮಾರ್ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರ ತೆರಿಗೆ ಮುಕ್ತ

Promotion

ಬೆಂಗಳೂರು, ಜೂನ್ 03, 2022 (www.justkannada.in): ಉತ್ತರ ಪ್ರದೇಶದಲ್ಲಿ ಅಕ್ಷಯ್ ಕುಮಾರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ಮುಕ್ತಗೊಳಿಸಲಾಗಿದೆ.

ಲಖನೌದ ಲೋಕಭವನದಲ್ಲಿ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದ ವಿಶೇಷ ಪ್ರದರ್ಶವನ್ನು ಏರ್ಪಡಿಸಲಾಗಿತ್ತು. ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್, ಮಾನುಸಿ ಚಿಲ್ಲರ್ ಮತ್ತು ನಿರ್ದೇಶಕ ಚಂದ್ರ ಪ್ರಕಾಶ್ ದ್ವಿವೇದಿ ಉಪಸ್ಥಿತರಿದ್ದರು.

ಐತಿಹಾಸಿಕ ಆಧಾರಿತ ಚಿತ್ರವನ್ನು ತನ್ನ ಸಂಪುಟ ಸಹೋದ್ಯೋಗಿಗಳೊಂದಿಗೆ ಇಂದು ವೀಕ್ಷಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದ್ದಾರೆ.

ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಮತ್ತಿತರರು ಸಿನಿಮಾ ವೀಕ್ಷಿಸಿದರು.