ಆಲಮಟ್ಟಿ ಜಲಾಶಯಕ್ಕೆ ಬಾಗೀನ ಅರ್ಪಣೆ: ನೆರೆ ಪರಿಹಾರ ಬಿಡುಗಡೆ ಮಾಡಿದ್ದಕ್ಕೆ ಕೇಂದ್ರಕ್ಕೆ ಅಭಿನಂದನೆ ಸಲ್ಲಿಸಿದ  ಸಿಎಂ ಬಿಎಸ್ ಯಡಿಯೂರಪ್ಪ…

Promotion

ವಿಜಯಪುರ,ಅ,5,2019(www.justkannada.in):  ರಾಜ್ಯದ ನೆರೆ ಸಂತ್ರಸ್ತರಿಗೆ 1200 ಕೋಟಿ ರೂ ನೆರೆ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಅಭಿನಂದನೆ ಸಲ್ಲಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಜಯಪುರ ಜಿಲ್ಲೆ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಅರಣ್ಯ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ ಪಾಟೀಲ್ ಹಾಗೂ ಶಾಸಕರು ಉಪಸ್ಥಿತರಿದ್ದರು.

ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ‌ರಾಜ್ಯದಲ್ಲಿ ಪ್ರವಾಹದಿಂದ ಸುಮಾರು 34 ಸಾವಿರ ಕೋಟಿ ನಷ್ಟವಾಗಿದೆ. ಕೇಂದ್ರ ಸರ್ಕಾರ ಮಧ್ಯಂತರ ಪರಿಹಾರವಾಗಿ 1200 ಕೋಟಿ ರೂ ಬಿಡುಗಡೆ ಮಾಡಿದೆ. ಇನ್ನೂ ಹೆಚ್ಚಿನ ನೆರವು ನಮಗೆ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಭ್ರಮನಿರಸವಾಗಿದ್ದಾರೆ. ಹೀಗಾಗಿ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ.‌ ರಾಜ್ಯದಲ್ಲಿ ಯಾವುದೇ ‌ಅಭಿವೃದ್ದಿ‌ ಕೆಲಸಗಳು ಸ್ಥಗಿತವಾಗಿಲ್ಲ. ಆಲಮಟ್ಟಿ ಜಲಾಶಯ ಎತ್ತರಗೊಳಿಸಲು ತೀರ್ಮಾನಿಸಲಾಗಿದೆ. ಮುಂದಿನ ಬಜೆಟ್ ನಲ್ಲಿ 20 ಸಾವಿರ ಕೋಟಿ ರೂ ಈ ಯೋಜನೆಗೆ‌ ಮೀಸಲಿಡುವುದಾಗಿ ಘೋಷಣೆ ಮಾಡಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿ. ಎಸ್. ಯಡಿಯೂರಪ್ಪ  ಹೇಳಿದ್ದಿಷ್ಟು…

ಅಧಿಕಾರಿಗಳೊಂದಿಗೆ ಪ್ರವಾಹ ಪರಿಹಾರ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇನೆ. ಸರಕಾರ ಈಗಾಗಲೇ ರೂ. 2500 ಕೋ. ಬಿಡುಗಡೆ ಮಾಡಲಾಗಿದೆ. ಹೀಗಾಗಿ ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಹಣವಿದೆ. ಇನ್ನು ಹೆಚ್ಚುವರಿಯಾಗಿ ಹಣ ಬಿಡುಗಡೆ ಮಾಡುತ್ತೇವೆ. ಈ ಮಧ್ಯೆ ಕೇಂದ್ರದಿಂದ ರೂ. 1200 ಕಟಿ ರೂ. ತಾತ್ಕಾಲಿಕ ಹಣ ಬಿಡುಗಡೆಯಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ, ಅಮಿತ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಆಲಮಟ್ಟಿ ಕೃಷ್ಣಾ ಜಲಾಶಯದ ಎತ್ತರಕ್ಕೆ ನಾವು ಬದ್ಧರಾಗಿದ್ದೇವೆ. ರಾಜ್ಯದ ಪಾಲಿನ ನೀರನ್ನು ಸದ್ಬಳಕೆ ಮಾಡಿಕೊಳ್ಳುತ್ತೇವೆ. ಆಲಮಟ್ಟಿ ಯಿಂದ ಸಂತ್ರಸ್ತರಾಗುವ 20 ಹಳ್ಳಿಗಳ ಸ್ಥಳಾಂತರಕ್ಕೆ ಮುಂದಿನ ಬಜೆಟ್ ನಲ್ಲಿ  20 ಸಾವಿರ ಕೋಟಿ ರೂ. ಹಣವನ್ನು ಮೀಸಲುಡುತ್ತೇನೆ ಎಂದು ಭರವಸೆ ನೀಡಿದರು.

ಔರಾದ್ಕರ್  ವರದಿ ಜಾರಿ ಬಗ್ಗೆ ನಾಡಿದ್ದು ಚರ್ಚೆ ಮಾಡಿ‌ ಹಣ ಹೊಂದಿಸುತ್ತೇನೆ. ಇನ್ನು ಸಧ್ಯಕ್ಕೆ ಹೊಸ ಜಿಲ್ಲೆ ರಚನೆಯ ಯಾವ  ಯೋಚನೆಯೂ ನನ್ನ ಮುಂದೆ ಇಲ್ಲ ಎಂದು ಸಿಎಂ ಬಿಎಸ್ ವೈ ತಿಳಿಸಿದರು.

ಪ್ರಧಾನಿ ಭೇಟಿಗೆ ಅವಕಾಶ ನಿರಾಕರಣೆ  ಎಂದು ಮಾಜಿ ಸಿಎಂ ಎಚ್ ಡಿ ಕೆ ಆರೋಪ  ಕುರಿತು ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಕುಮಾರಸ್ವಾಮಿ ಮಾಜಿ ಪ್ರಧಾನಿಯ ಮಗ ಎಂದು ಮೋದಿ ಭೇಟಿಯಾಗಿರಬಹುದು. ಕುಮಾರಸ್ವಾಮಿ ಭ್ರಮ ನಿರಸನರಾಗಿದ್ದಾರೆ. ನಾವು ಕೇಳಿದ ಕೆಲಸಗಳು ಕೇಂದ್ರದಿಂದ ಆಗುತ್ತಿವೆ. ಸಿದ್ದರಾಮಯ್ಯ ಮತ್ತು ಎಚ್ಡಿಕೆ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದು ತಿಳಿಸಿದರು.

Key words: Alamatti dam-CM BS Yeddyurappa- congratulates- Center – release –flood relief