ಅಖಿಲ ಭಾರತ ಸಾರ್ವತ್ರಿಕ ಮುಷ್ಕರ: ಮೈಸೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ…

ಮೈಸೂರು,ನವೆಂಬರ್,26,2020(www.justkannada.in):   ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನ ವಿರೋಧಿಸಿ ಇಂದು ದೇಶಾದ್ಯಂತ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದ್ದು ಈ ಹಿನ್ನೆಲೆ ಮೈಸೂರಿನಲ್ಲಿ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದವು.all-india-strike-mass-protests-labor-unions-mysore

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ನಗರದ ಟೌನ್ ಹಾಲ್ ಮೈದಾನದಲ್ಲಿ  ವಿವಿಧ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಇದೇ ವೇಳೆ ಮುಷ್ಕರದ ಜೊತೆ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

ಕಾರ್ಮಿಕ ಸಂಘಟನೆಗಳ ಮುಖಂಡರ ಹೋರಾಟದ ಕರೆಗೆ ಓಗೊಟ್ಟು ನೂರಾರು ಕಾರ್ಮಿಕರು ಟೌನ್ ಹಾಲ್ ಬಳಿ ಜಮಾಯಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಧರಣಿಯಲ್ಲಿ ಪ್ರತಿಭಟನೆಯಲ್ಲಿ ಸಿಐಟಿಯು, ಎಐಟಿಯುಸಿ, ಐಎನ್ಟಿಯುಸಿ, ಎಐಯುಟಿಯುಸಿ ಸಂಘಟನೆಗಳ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ರೈತ, ದಲಿತ ಸಂಘಟನೆಗಳು ಬೆಂಬಲ ಸೂಚಿಸಿದ್ದವು.

ಪ್ರತಿಭಟನೆಯಲ್ಲಿ ಕಾರ್ಮಿಕರು ಸೇರಿದಂತೆ ವಿವಿಧ ಕಾರ್ಮಿಕ, ರೈತ, ದಲಿತ ಸಂಘಟನೆಗಳ ಮುಖಂಡರು ಭಾಗಿಯಾದ ಹಿನ್ನೆಲೆ ಮೈದಾನದ ತುಂಬೆಲ್ಲಾ ಕೆಂಪು ಬಾವುಟಗಳು ರಾರಾಜಿಸುತ್ತಿದ್ದವು.

Key words: All India – Strike-Mass protests – labor unions – Mysore.