ಮೇಕೆದಾಟು ಯೋಜನೆ ಸಂಬಂಧ ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲಿ- ಡಿ.ಕೆ ಶಿವಕುಮಾರ್.

Promotion

ಬೆಂಗಳೂರು,ಜೂನ್,14,2022(www.justkannada.in):  ಮೇಕೆದಾಟು ಯೋಜನೆ ಸಂಬಂಧ ಮಾತನಾಡಲು ಕೇಂದ್ರದ ಬಳಿ ಸರ್ವಪಕ್ಷ ನಿಯೋಗ ಕರೆದೊಯ್ಯಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದರು.

ಮೇಕೆದಾಟು ಯೋಜನೆ ಜಾರಿಗೆ ವಿರೋಧಿಸಿ ತಮಿಳುನಾಡು ಸಿಎಂ ಸ್ಟಾಲಿನ್ ನಿನ್ನೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಮೇಕೆದಾಟು ಯೋಜನೆ ಬಗ್ಗೆ ಚರ್ಚೆ ಬೇಡ ಎಂದು ಮನವಿ ಮಾಡಿದ್ದರು.

ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಲು ಬಿಜೆಪಿ ನಾಯಕರಿಗೆ ಹೆದರಿಕೆ. ಹೀಗಾಗಿ  ಸರ್ವಪಕ್ಷ ನಿಯೋಗ ಕರೆದೊಯ್ಯಲ್ಲಿ.  ಪ್ರಧಾನಿ ಜತೆ  ನಾವು ಮಾತನಾಡುತ್ತೇವೆ. ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸುತ್ತೇವೆ ಎಂದರು.
key words: All-Party delegation-mekadatu- Plan-DK Shivakumar.