ಡಿ.19ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಈ ಬಾರಿ 6 ವಿಧೇಯಕಗಳ ಮಂಡನೆ- ಸ್ಪೀಕರ್ ಕಾಗೇರಿ.

Promotion

ಬೆಳಗಾವಿ,ಡಿಸೆಂಬರ್,12,2022(www.justkannada.in):   ಡಿಸೆಂಬರ್ 19 ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ  ಚಳಿಗಾಲದ ಅಧಿವೇಶನ ನಡೆಯಲಿದ್ದು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಾರಿ 6 ವಿಧೇಯಕಗಳನ್ನ ಮಂಡನೆ ಮಾಡಲಾಗುವುದು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಅಧಿವೇಶನಕ್ಕೆ  ಜಿಲ್ಲಾಡಳಿತ 15 ತಂಡಗಳನ್ನ ನೇಮಿಸಿಕೊಂಡಿದ್ದಾರೆ. ವಿಧಾನಮಂಡಲ ವತಿಯಿಂದ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇನೆ. ಬೆಳಗಾವಿಯಲ್ಲಿ ನಡೆಯುತ್ತಿರುವ 10ನೇ ಅಧಿವೇಶನ ಇದಾಗಿದೆ. ಎಲ್ಲಾ ಇಲಾಖೆಯವರು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಸದನ ನಡೆಸಲು ಬೇಕಾದ ಪೂರಕ ವ್ಯವಸ್ಥೆ ಮಾಡಲಾಗಿದೆ. ಈ ಅಧಿವೇಶನದಲ್ಲಿ 6 ವಿಧೇಯಕ ತರುತ್ತೇವೆ. ಸಚಿವರು, ಶಾಸಕರು, ಅಧಿಕಾರಿಗಳಿಗೆ ವಸತಿಗೆ ವ್ಯವಸ್ಥೆ ಮಾಡಿದ್ದೇವೆ ಎರಡು ಸಾವಿರಕ್ಕೂ ಹೆಚ್ಚು ರೂಮ್ ಗಳನ್ನ ವ್ಯವಸ್ಥೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಮೊದಲ ದಿನ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ. ಎರಡನೇ ದಿನ ಕಲಾಪಗಳು ನಡೆಯಲಿವೆ. ಸದನದ ಬಗ್ಗೆ ಹಗುರವಾಗಿ ಮಾತಾಡುವುದನ್ನು ನಾನು ಸಹಿವುಸುವುದಿಲ್ಲ. ಅಧಿವೇಶನದಲ್ಲಿ ಸಚಿವರು, ಶಾಸಕರ ಹಾಜರಾತಿ ಕಡ್ಡಾಯಕ್ಕೆ ಕ್ರಮ ವಹಿಸಲಾಗಿದೆ. ಅಧಿವೇಶನದಲ್ಲಿ ಪ್ರತಿಯೊಬ್ಬ ಶಾಸಕರು ಕಡ್ಡಾಯವಾಗಿ ಹಾಜರಾಗಬೇಕು. ಒಂದುವೇಳೆ ಸದನಕ್ಕೆ ಗೈರಾದರೆ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಹಿಂದಿನ ಅಧಿವೇಶನ ಸಮಯದಲ್ಲಿ, ಅಧಿವೇಶನಕ್ಕೆ ಹೋಗಲ್ಲ, ಅಲ್ಲೇನಿದೆ ಎಂಬ ಶಾಸಕರ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ ಸದನದ ಬಗ್ಗೆ ಹಗುರವಾಗಿ ಮಾತಾಡುವುದನ್ನು ನಾನು ಸಹಿವುಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Key words: All preparations -Belgaum winter- session – December 19-Speaker -Kageri.