ಆಲ್ ರೌಂಡರ್ ರವೀಂದ್ರ ಜಡೇಜಾಗೆ ‘ಶ್ರೇಷ್ಠ ಟೆಸ್ಟ್ ಕ್ರಿಕೆಟಿಗ ಗೌರವ’

Promotion

ಮುಂಬೈ, ಜುಲೈ 02, 2020 (www.justkannada.in): ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾಗೆ ವಿಸ್ಡನ್ ನಿಯತಕಾಲಿಕೆಯ 21 ನೇ ಶತಮಾನದ ಶ್ರೇಷ್ಠ ಟೆಸ್ಟ್ ಕ್ರಿಕೆಟಿಗ ಗೌರವ ಲಭಿಸಿದೆ.

97.3 ಎಂವಿಪಿ ರೇಟಿಂಗ್ ಗಳಿಸಿರುವ ಜಡೇಜಾ ವಿಶ್ವದ ಶ್ರೇಷ್ಠ ಟೆಸ್ಟ್ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಲಂಕಾದ ಸ್ಪಿನ್ ದಿಗ್ಗಜ ಮುತ್ತಯ್ಯ ಮುರಳೀಧರನ್ ಮೊದಲ ಸ್ಥಾನದಲ್ಲಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಬೌಲಿಂಗ್ ಮಾತ್ರವಲ್ಲದೆ, ಬ್ಯಾಟಿಂಗ್ ನಲ್ಲೂ ಜಡೇಜಾ ಉತ್ತಮ ನಿರ್ವಹಣೆ ತೋರಿದ್ದಾರೆ.