ಕೋಟೆನಾಡಿನಲ್ಲಿ ಚಾಲೆಂಜಿಂಗ್ ಸ್ಟಾರ್ ! ‘ಮದಕರಿ ನಾಯಕ’ ಚಿತ್ರೀಕರಣಕ್ಕೆ ಭರದ ಸಿದ್ಧತೆ

Promotion

ಬೆಂಗಳೂರು, ಡಿಸೆಂಬರ್ 03, 2019 (www.justkannada.in): ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಮದಕರಿ ನಾಯಕ’ ಚಿತ್ರದ ಚಿತ್ರೀಕರಣಕ್ಕೆ ಭರದ ಸಿದ್ಧತೆಗಳು ನಡೆದಿವೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ರಾಕ್ ಲೈನ್ ವೆಂಕಟೇಶ್ ಬಂಡವಾಳ ಹೂಡುತ್ತಿದ್ದಾರೆ.

ಜನವರಿಯಲ್ಲಿ ಈ ಐತಿಹಾಸಿಕ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಸೋಮವಾರದಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ ಚಿತ್ರತಂಡ, ಕೋಟೆನಾಡಿನ ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸಿ ಮದಕರಿನಾಯಕ ಪ್ರತಿಮೆಗೆ ನಮಿಸಿ ಆಶೀರ್ವಾದ ಪಡೆದಿದೆ.

ನಾಯಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ನೇತೃತ್ವದಲ್ಲಿ ತಂಡ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಆಶೀರ್ವಾದ ಪಡೆದುಕೊಂಡಿದೆ.