ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಪಡೆಯಬೇಕು :  ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ

All staff,Mandatory,Vaccine,Must get,Minister,Education,Dr.K.Sudhakar,NOTE
Promotion

ಬೆಂಗಳೂರು,ಫೆಬ್ರವರಿ,20,2021(www.justkannada.in) : ಕೋವಿಡ್ ಲಸಿಕೆಯನ್ನು ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಪಡೆಯಬೇಕು. ಇದು ಎರಡನೇ ಅಲೆ ಬಾರದಂತೆ ತಡೆಗಟ್ಟಲು ನೆರವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸೂಚನೆ ನೀಡಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.jkಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಉಚಿತವಾಗಿ ಲಸಿಕೆ ದೊರೆಯುವಂತೆ ಮಾಡಿರುವಾಗ ಉದಾಸೀನ ಮಾಡಬಾರದು. ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಕೋವಿಡ್ ಲಸಿಕೆ ಪಡೆಯಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ವೀಡಿಯೋ ಸಂವಾದ ನಡೆಸಿ ಸೂಚನೆ ನೀಡಲಿದ್ದಾರೆ ಎಂದರು.

ಲಸಿಕೆ ಪಡೆದ ಬಳಿಕ ಸೋಂಕಿನ ತೀವ್ರತೆ ಕಡಿಮೆಯಾಗುತ್ತದೆ. ಅದರಿಂದ ಸಾವು ಉಂಟಾಗುವುದಿಲ್ಲ. ಸಾರ್ವಜನಿಕರು ಇನ್ನೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮದುವೆ ಮೊದಲಾದ ಸಮಾರಂಭ, ಸಭೆಗಳು ಹೆಚ್ಚುತ್ತಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳಬೇಕು ಎಂದು ಹೇಳಿದರು.

ಎರಡನೇ ಬಾರಿಗೆ ಬಾರದಂತೆ ತಡೆಗಟ್ಟಬೇಕು ಎಂಬ ಉದ್ದೇಶದಿಂದ ಕಟ್ಟೆಚ್ಚರದ ಕ್ರಮ ಕೈಗೊಳ್ಳಲಾಗಿದೆ. ಬ್ರೆಜಿಲ್ ಮೊದಲಾದ ದೇಶಗಳ ವೈರಾಣು ಇಲ್ಲಿ  ಪತ್ತೆಯಾಗಿಲ್ಲ. ಕೊರೊನಾ ಸೋಂಕು ಈಗ ಕಡಿಮೆಯಾಗಿದೆ. ಗಂಭೀರವಾಗಿ ಸೋಂಕು ಹರಡಿಲ್ಲ. ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದರೆ  ಸೋಂಕು ತೀವ್ರವಾಗುವುದಿಲ್ಲ ಎಂದಿದ್ದಾರೆ.

ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರಿಗೆ ನೆಗೆಟಿವ್ ವರದಿ ಕಡ್ಡಾಯ

All staff,Mandatory,Vaccine,Must get,Minister,Education,Dr.K.Sudhakar,NOTE

ನೆರೆಯ ರಾಜ್ಯಗಳಲ್ಲಿ ಹೆಚ್ಚಿರುವುದರಿಂದ ನಮ್ಮಲ್ಲೂ ಬರಬಹುದು. ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರು ಕೊರೊನಾ ನೆಗೆಟಿವ್ ವರದಿ ಹೊಂದಿರಬೇಕು ಎಂದು ಸೂಚಿಸಲಾಗಿದೆ. ಆಯಾ ಜಿಲ್ಲಾಡಳಿತ, ಪೊಲೀಸ್ ಸಿಬ್ಬಂದಿ ನೆರವಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಮ್ಮಲ್ಲಿ ಸೋಂಕಿತರ ಪ್ರಮಾಣ ಕಡಿಮೆ ಇದೆ. ಬಹಳ ದೊಡ್ಡ ಕಠಿಣ ಕ್ರಮಗಳು ಈಗ ಬೇಕಿಲ್ಲ. ಮುಂದಿನ ದಿನಗಳಲ್ಲಿ ಎರಡನೇ ಅಲೆ ಬರುವುದನ್ನು ತಡೆಗಟ್ಟಲು ಸಫಲವಾದರೆ ಲಾಕ್ ಡೌನ್ ಮೊದಲಾದ ಕ್ರಮಗಳ ಪ್ರಶ್ನೆಯೇ ಬರುವುದಿಲ್ಲ ಎಂದು ತಿಳಿಸಿದರು.

key words : All staff-Mandatory-Vaccine-Must get-Minister-Education-
Dr.K.Sudhakar-NOTE