ಮತದಾರರಿಗೆ ಹಣದ ಆಮಿಷ ಆರೋಪ: ಸಿಎಂ ಸೇರಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ದೂರು.

Promotion

ಬೆಂಗಳೂರು,ಜನವರಿ,25,2023(www.justkannada.in): ಮತದಾರರಿಗೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ  ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೇರಿ ಬಿಜೆಪಿ ನಾಯಕರ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ದೂರು ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,   ಸಿಎಂ ಬೊಮ್ಮಾಯಿ ಮತ್ತು ಅವರ ತಂಡ ಭ್ರಷ್ಟಾಚಾರದ ಪಿತಾಮಹ.  ಬಿಜೆಪಿ ನಾಯಕರು ಮತದಾರರಿಗೆ ಅಮಿಷವೊಡ್ಡಲು ಹೊರಟಿದ್ದಾರೆ 40 ಪರ್ಸೆಂಟ್ ಕಮಿಷನ್ ಮೂಲಕ ಸಾವಿರಾರು ಕೋಟಿ ರೂ. ಸಂಗ್ರಹಿಸಿದ್ದಾರೆ. ರಮೇಶ್ ಜಾರಕಿಹೊಳಿ ಒಂದು ಮತಕ್ಕೆ 6 ಸಾವಿರ ರೂ. ಕೊಡುತ್ತೇವೆ ಎಂದಿದ್ದಾರೆ. ಅಮಿಷದ ವಿಡಿಯೋ ಇದೆ. ಈ ಸಂಬಂಧ ದಾಖಲೆ ಸಮೇತ ಪೊಲೀಸರಿಗೆ ದೂರು ನೀಡಿದ್ದೇವೆ. ಪೊಲೀಸರು ಎಫ್ ಐಆರ್ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸುತ್ತೇವೆ ಎಂದರು.

Key words: allegations -Congress- complaints –against- BJP leaders