ರಾತ್ರೋರಾತ್ರಿ ತಮಿಳುನಾಡಿಗೆ ನೀರು: ಅಧಿಕಾರಿಗಳ ವಿರುದ್ದ ರೈತರ ಆಕ್ರೋಶ…

ಮೈಸೂರು,ಜು, 20,2019(www.justkannada.in): ಕಬಿನಿ ಜಲಾಶಯದಿಂದ  ಅಧಿಕಾರಿಗಳು ತಮಿಳುನಾಡಿಗೆ ರಾತ್ರೋರಾತ್ರಿ ಕದ್ದುಮುಚ್ಚಿ ನೀರು ಹರಿಸುತ್ತಿದ್ದಾರೆ ಎಂದು  ಆರೋಪಿಸಿ ಅಧಿಕಾರಿಗಳ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು ಸ್ಥಳೀಯ ರೈತರಿಗೆ ನೀರು ಬಿಡದೆ  ತಮಿಳುನಾಡಿಗೆ ನೀರು ಹರಿಬಿಟ್ಟದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸುಭಾಷ್ ಪವರ್ ಕಾರ್ಪೊರೇಷನ್ ಗೇಟ್ ಮೂಲಕ ತಮಿಳುನಾಡಿಗೆ ನೀರು ಹರಿಸಲಾಗಿದ್ದು, ಜಲಾಶಯದಲ್ಲಿ ಗರಿಷ್ಠ ಮಟ್ಟ ತಲುಪುವ ಮುನ್ನ ತಮಿಳುನಾಡಿಗೆ ನೀರು ಹರಿದಿದೆ ಎಂದು  ಚಾಮರಾಜನಗರ ಜಿಲ್ಲೆಯ ಯಳಂದೂರು, ಕೊಳ್ಳೇಗಾಲ, ಹನೂರು ಹಾಗು ಟಿ.ನರಸೀಪುರ ಭಾಗದ ಬಹುತೇಕ ಭಾಗದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಭಾಷ್ ಪವರ್ ಕಾರ್ಪೊರೇಷನ್ ಕಂಪನಿಯಲ್ಲಿ ತಮಿಳಿಗರೇ ಹೆಚ್ಚಾಗಿ ಕೆಲಸ ಮಾಡುತ್ತಿದ್ದು, ಕಂಪನಿ ಗೇಟ್ ನಿಂದ ಅಕ್ರಮವಾಗಿ ತಮಿಳುನಾಡಿಗೆ ಅಧಿಕಾರಿಗಳು ನೀರು ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ರಾತ್ರೋರಾತ್ರಿಯಿಂದ 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಬಿಟ್ಟ ಆರೋಪ ಕೇಳಿ ಬಂದಿದೆ.  ಜಲಾಶಯ ಗರಿಷ್ಠ ಮಟ್ಟ ತಲುಪಲು ಇನ್ನೂ 14 ಅಡಿ ಬಾಕಿ ಇದೆ. ನಿನ್ನೆ 70 ಅಡಿ ಇದ್ದ ನೀರಿನ ಮಟ್ಟ ಈಗ 69 ಅಡಿಗೆ ಕುಸಿತ ಕಂಡಿದೆ. ಒಂದೇ ದಿನದಲ್ಲಿ 1 ಅಡಿ ನೀರು  ಕಡಿಮೆಯಾಗಿದ್ದು. ಹೀಗಾಗಿ ತಮಿಳುನಾಡಿಗೆ ಕೂಡಲೇ ನೀರು ನಿಲ್ಲಿಸಿ ಮೊದಲು ನಾಲೆಗಳಿಗೆ ನೀರು ಬಿಡಿ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಜನಜಾನುವಾರುಗಳಿಗೆ ನೀರಿಲ್ಲದೆ ಪರದಾಡುತ್ತಿರುವ ಬಲ ದಂಡೆ ನಾಲೆಗೆ ನೀರು ಬಿಡಬೇಕು. ಕಳೆದ ವರ್ಷದ ಈ ಹೊತ್ತಿಗೆ ನಾಲೆಗಳಿಗೆ ನೀರು ಬಿಡಲಾಗಿತ್ತು.

Key words: Allegations –kabini-water Tamil Nadu- Farmers-outrage