ಕಲ್ಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಹಿನ್ನಡೆ: ಬೇರೆ ಬೇರೆ ಕ್ಷೇತ್ರಗಳಲ್ಲಿ ಯಾರ್ಯಾರು ಲೀಡ್ ಗೊತ್ತೆ..?

kannada t-shirts

ಕಲ್ಬುರ್ಗಿ,ಮೇ,23,2019(www.justkannada.in): ಕಲ್ಬುರ್ಗಿಯಲ್ಲಿ   ಮೈತ್ರಿ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಗೆ 9 ಸಾವಿರ ಮತಗಳ ಅಂತರದಲ್ಲಿ ಹಿನ್ನಡೆಯಾಗಿದೆ. ಕಲ್ಬುರ್ಗಿಯಲ್ಲಿ  ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಮುನ್ನಡೆ ಸಾಧಿಸಿದ್ದಾರೆ.

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಿವಿ ಸದಾನಂದಗೌಡರಿಗೆ ಸಾವಿರ ಮತಗಳ ಅಂತರದಿಂದ ಮುನ್ನಡೆ ಇದೆ. ತುಮಕೂರಿನಲ್ಲಿ  ಮೈತ್ರಿ ಅಭ್ಯರ್ಥಿ ಹೆಚ್.ಡಿ ದೇವೇಗೌಡ 1139 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ . ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ 4,514  ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಮುನ್ನಡೆಯಲ್ಲಿದ್ದಾರೆ.

ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅನಂತ್ ಕುಮಾರ್76 ಸಾವಿರ ಮತಗಳ ಮುನ್ನಡೆ ಸಾಧಿಸಿದರೇ  ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ 46 ಸಾವಿರ ಮತಗಳ ಅಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ.

Key words: #Mallikarjun Kharge  #Kalbargi #election result

 

website developers in mysore