ನೂತನ ಡಿಜಿ &ಐಜಿಪಿಯಾಗಿ ಅಲೋಕ್ ಮೋಹನ್ ಅಧಿಕಾರ ಸ್ವೀಕಾರ.

Promotion

ಬೆಂಗಳೂರು,ಮೇ,22,2023(www.justkannada.in):  ಕರ್ನಾಟಕದ ನೂತನ ಡಿಜಿ &ಐಜಿಪಿಯಾಗಿ  ಅಲೋಕ್ ಮೋಹನ್  ಅವರು ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಅವರು ನೂತನ ಡಿಜಿ &ಐಜಿಪಿ ಅಲೋಕ್ ಮೋಹನ್ ಗೆ ಅಧಿಕಾರ ಹಸ್ತಾಂತರಿಸಿದರು.  ಬೆಂಗಳೂರಿನ ನೃಪತುಂಗ ರಸ್ತೆಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅಲೋಕ್ ಮೋಹನ್, ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ಕಾನೂನು ಸುವ್ಯವಸ್ಥೆ ಕರ್ನಾಟಕದಲ್ಲಿ ಸಮರ್ಪಕವಾಗಿ ಇದೆ. ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ನಮ್ಮ ಮೊದಲ ಆದ್ಯತೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಸೈಬರ್ ಕ್ರೈಮ್​​ಗೆ ಕಡಿವಾಣಕ್ಕೆ ಆದ್ಯತೆ ನೀಡಲಾಗುತ್ತದೆ.. ಟ್ರಾಫಿಕ್ ಮ್ಯಾನೇಜ್ಮೆಂಟ್ ಕೂಡ ಮುಖ್ಯವಾಗಿದೆ. ಟ್ರಾಫಿಕ್ ಜಾಮ್ ಆಗದಂತೆ ಗಮನ ನೀಡಲಿದ್ದೇವೆ ಎಂದು ಭರವಸೆ ನೀಡಿದರು. ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕವಾಗಿದ್ದಾರೆ.

Key words: Alok Mohan –new –karnataka-DG & IGP