ಕೃಷಿ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು..

ಬೆಂಗಳೂರು,ನವೆಂಬರ್, 18,2020(www.justkannada.in):  ಕೃಷಿ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು ಎಂದಿದೆ. ಈ ಮೂಲಕ  ಇಲಾಖೆಗೆ ಕೃಷಿ ಸಚಿವ  ಬಿ.ಸಿ.ಪಾಟೀಲ್ ಬಲ ತುಂಬಿದ್ದಾರೆ. kannada-journalist-media-fourth-estate-under-loss

ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತಿದ್ದುಪಡಿಗೆ ಒಪ್ಪಿಗೆ ಸೂಚಿಸಲಾಗಿದೆ.

ಪ್ರಸ್ತುತ ಕೃಷಿ ಇಲಾಖೆಯಲ್ಲಿ ಕರ್ನಾಟಕ ಕೃಷಿ ಸೇವೆಗಳು (ನೇಮಕಾತಿ) ನಿಯಮಗಳು, 1999 ಜಾರಿಯಲ್ಲಿರುತ್ತದೆ.  ತದನಂತರ, 2014ರಲ್ಲಿ ಕೆಲವೊಂದು ತಿದ್ದುಪಡಿಗಳನ್ನು ಮಾಡಲಾಗಿರುತ್ತದೆ.ಕಳೆದ 20 ವರ್ಷಗಳಿಂದ ಕೃಷಿ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗಳಿಗೆ ಸಮಗ್ರ ಪರಿಷ್ಕರಣೆ ಮಾಡಿರುವುದಿಲ್ಲ. ಪ್ರಸ್ತುತ ಅವಧಿಯಲ್ಲಿ ಸಮಗ್ರ ಪರಿಷ್ಕರಣೆ ಮಾಡಿ ಜಾರಿಗೆ ತರಲಾಗಿದ್ದು,  ಕೃಷಿ ಆಯುಕ್ತರು ಹಾಗೂ ಜಲಾನಯನ ಅಭಿವೃದ್ಧಿ ಆಯುಕ್ತರು, ಈ ಹುದ್ದೆಗಳನ್ನು ಸೇರಿಸಲಾಗಿದ್ದು, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ಪ್ರಯತ್ನದಿಂದ ನಿಯಮಾವಳಿಗಳಿಗೆ ತಿದ್ದುಪಡಿ ತರುವ ಮೂಲಕ ಇಲಾಖೆಗೆ ಬಲ ತುಂಬಿದಂತಾಗಿದೆ.amendment-recruitment-regulations-department-agriculture-cabinet-meeting

ಸಹಾಯಕ ಕೃಷಿ ನಿರ್ದೇಶಕರು ವೃಂದದ ನೇರ ನೇಮಕಾತಿ ಮತ್ತು ಮುಂಬಡ್ತಿ ಅನುಪಾತವನ್ನು 30:70 ಬದಲಾಗಿ 20:80 ರಂತೆ ನಿಗದಿಪಡಿಸಲಾಗಿದೆ.ಸಹಾಯಕ ಕೃಷಿ ನಿರ್ದೇಶಕ, ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ವೃಂದಗಳ ನೇರ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ತೀರ್ಮಾನಿಸಲಾಗಿದೆ.ಕೃಷಿ ಅಧಿಕಾರಿ ವೃಂದದ ನೇರ ನೇಮಕಾತಿ ಮತ್ತು ಮುಂಬಡ್ತಿ ಅನುಪಾತವನ್ನು 50:50 ರಂತೆ ನಿಗಧಿಪಡಿಸಲಾಗಿದ್ದು, ಶೇಕಡ 50ರಲ್ಲಿ ನೇರ ನೇಮಕಾತಿಯಲ್ಲಿ ಶೇಕಡ 85ರಷ್ಟು ಕೃಷಿ ಪದವೀದರರಿಗೆ, ಶೇಕಡ 15ರಷ್ಟು ಬಿ.ಟೆಕ್ (ಕೃಷಿ ಇಂಜಿನಿಯರಿಂಗ್) / ಬಿ.ಟೆಕ್ (ಆಹಾರ ತಂತ್ರಜ್ಞಾನ / ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿದೆ.   ಕೃಷಿ ಪದವಿ ಹೊಂದಿಲ್ಲದ ಸಹಾಯಕ ಕೃಷಿ ಅಧಿಕಾರಿಗಳು ಇಲಾಖೆಯಲ್ಲಿ ಕಳೆದ 30-35 ವರ್ಷಗಳಿಂದ ಸೇವೆ ಸಲ್ಲಿಸಿದ್ದು, ಅವರಿಗೆ ಕೃಷಿ ಅಧಿಕಾರಿಯಾಗಿ ಒಂದು ಬಾರಿಗೆ ಮುಂಬಡ್ತಿ ನೀಡಲು ತೀರ್ಮಾನಿಸಲಾಗಿದೆ.

ನಿಯಮಾವಳಿಗೆ ತಿದ್ದುಪಡಿ ತರುವ ಮೂಲಕ ಇಲಾಖೆಯ ಕೆಳಹಂತದ ಅಧಿಕಾರಿಗಳಾದ ಸಹಾಯಕ ಕೃಷಿ ಅಧಿಕಾರಿಗಳನ್ನು ಶೇಕಡ 100ರಷ್ಟು ನೇರ ನೇಮಕಾತಿಯಿಂದ ಭರ್ತಿ ಮಾಡಲು ಉದ್ದೇಶಿಸಲಾಗಿದೆ. ಆ ಮೂಲಕ ಈ ನೇಮಕಾತಿಯಲ್ಲಿ ಶೇಕಡ 85ರಷ್ಟು ಕೃಷಿ ಪದವೀದರರಿಗೆ, ಶೇಕಡ 15ರಷ್ಟು ಬಿ.ಟೆಕ್ (ಕೃಷಿ ಇಂಜಿನಿಯರಿಂಗ್) / ಬಿ.ಟೆಕ್ (ಆಹಾರ ತಂತ್ರಜ್ಞಾನ / ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿದೆ.

Key words: – Amendment –Recruitment- Regulations – Department – Agriculture-cabinet meeting