ಅಮಿತ್​ ಶಾರನ್ನು ಕರೆಸಿ ದೊಡ್ಡ ಸಮಾವೇಶಕ್ಕೆ ಚಿಂತನೆ –ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ

Promotion

ಬೆಂಗಳೂರು,ನವೆಂಬರ್,15,2023(www.justkannada.in):   ಇಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್​ ಶಾರನ್ನು ಕರೆಸಿ ದೊಡ್ಡ ಸಮಾವೇಶ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ತಿಳಿಸಿದರು.

ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಎಸ್ ಯಡಿಯೂರಪ್ಪ, ಒಂದು ಲಕ್ಷ ಜನರನ್ನು ಸೇರಿಸಿ ಕಾರ್ಯಕ್ರಮ ಮಾಡುವ ಅಪೇಕ್ಷೆ ಇದೆ. ಪ್ರಧಾನಿ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಆದೇಶದಂತೆ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಕಾರ್ಯಕರ್ತರಲ್ಲಿ ಉತ್ಸಾಹ ಕಾಣುತ್ತಿದೆ. ಎಲ್ಲಾ ನಾಯಕರು ವಿಜಯೇಂದ್ರಗೆ ಆಶೀರ್ವಾದ ಮಾಡಿದ್ದಕ್ಕೆ ಸಂತೋಷವಾಗಿದೆ ಎಂದರು.

ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ-ಮಾಜಿ ಸಿಎಂ ಬೊಮ್ಮಾಯಿ.

ಸೂಕ್ತ ಸಮಯದಲ್ಲಿ ವಿಜಯೇಂದ್ರ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ವಿಜಯೇಂದ್ರಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ವಿಧಾನಸಭೆ ಚುನಾವಣೆಯ ನಂತರ ಬಿಜೆಪಿಗೆ ಶಕ್ತಿ, ಉತ್ಸಾಹ ಬಂದಿದೆ. ಎಲ್ಲರೂ ಒಟ್ಟಾಗಿ ನಡೆದರೆ ಲೋಕಸಭೆಯಲ್ಲಿ ಯಶಸ್ಸು ಸಿಗುತ್ತದೆ. ವಿಜಯೇಂದ್ರ ಸಾರಥ್ಯದಲ್ಲಿ 28 ಲೋಕಸಭಾ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Key words:  Amit Shah -big -program – Former CM -BS Yeddyurappa