ಅಮಿತ್ ಶಾ ಪುತ್ರ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ

Promotion

ಬೆಂಗಳೂರು, 31, 2021 (www.justkannada.in): ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಜೈ ಶಾ ಅವಿರೋಧ ಆಯ್ಕೆಯಾಗಿದ್ದಾರೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಕಾರ್ಯದರ್ಶಿಯೂ ಆಗಿರುವ ಜಯ ಶಾ ಏಶ್ಯನ್ ಕ್ರಿಕೆಟ್ ಕೌನ್ಸಿಲ್(ಎಸಿಸಿ)ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಬಿಸಿಸಿಐ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಟ್ವಿಟರ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಬಾಂಗ್ಲಾದೇಶದ ಕ್ರಿಕೆಟ್ ಮಂಡಳಿ(ಬಿಸಿಬಿ)ಅಧ್ಯಕ್ಷ ನಝ್ಮುಲ್ ಹುಸೇನ್ ಎಸಿಸಿ ಅಧ್ಯಕ್ಷರಾಗಿ ಈ ಹಿಂದೆ ಕಾರ್ಯನಿರ್ವಹಿಸಿದ್ದರು.

ಇದೀಗ ಜಯ ಶಾ ಎಸಿಸಿ ಅಧ್ಯಕ್ಷ ಸ್ಥಾನವಹಿಸಿಕೊಳ್ಳಲಿದ್ದಾರೆ. ಎಸಿಸಿ ಏಶ್ಯದ ಪ್ರಾದೇಶಿಕ ಆಡಳಿತ ಮಂಡಳಿಯಾಗಿದ್ದು, ಪ್ರಸ್ತುತ 24 ಸದಸ್ಯ ಅಸೋಸಿಯೇಶನ್ ಗಳನ್ನು ಒಳಗೊಂಡಿದೆ.