ಕನ್ನಡಪ್ರಭ ಕಾರ್ಯನಿರ್ವಾಹಕ ಸಂಪಾದಕರಾಗಿ ಅಂಶಿ ಪ್ರಸನ್ನಕುಮಾರ್‘ಗೆ ಬಡ್ತಿ

ಬೆಂಗಳೂರು, ಫೆಬ್ರವರಿ 14, 2022 (www.justkannada.in): ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅವರಿಗೆಕನ್ನಡಪ್ರಭಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ (ಎಕ್ಸಿಕ್ಯೂಟಿವ್ ಎಡಿಟರ್) ಬಡ್ತಿ ದೊರೆತಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪತ್ರಿಕೆಗಳಲ್ಲಿ ಮೈಸೂರಿನಲ್ಲಿದ್ದುಕೊಂಡೆ ಹುದ್ದೆಗೆ ಏರಿದ ಮೊದಲಿಗರು ಎಂಬ ಹೆಗ್ಗಳಿಕೆ ಇವರದು.

ಎಂಭತ್ತರ ದಶಕದಲ್ಲಿ ಮೈಸೂರಿನಲ್ಲಿ ಪತ್ರಿಕೋದ್ಯಮ ಆರಂಭಿಸಿದ ಇವರು  ’ಆಂದೋಲನಪತ್ರಿಕೆಯ ಮೂಲಕ ಪ್ರಸಿದ್ಧಿಗೆ ಬಂದವರು. ಕಳೆದ ೨೭ ವರ್ಷಗಳಿಂದಕನ್ನಡಪ್ರಭಮೈಸೂರು ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಮೈಸೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಅಧ್ಯಯನ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ರಾಜ್ಯ ಸರ್ಕಾರದ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯ ವಿಶೇಷ ಗೌರವ ಪ್ರಶಸ್ತಿ, ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ, ಜಿಲ್ಲಾಡಳಿತದ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಡಿವಿಜಿ ಪ್ರಶಸ್ತಿ, ಬೆಂಗಳೂರು ಪ್ರೆಸ್ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ  ಸೇರಿದಂತೆ ಸುಮಾರು ೪೦ ಪ್ರಶಸ್ತಿಗಳು ಸಂದಿವೆ.

ಪತ್ರಿಕೋದ್ಯಮದಲ್ಲಿನ ಸೇವೆಗಾಗಿ ೮೩ನೇ ಅಖಿಲ ಭಾರತ ಕನ್ನಡ ಸಾಹಿತ್ಯಸಮ್ಮೇಳನ, ಮೈಸೂರು ವಿವಿ, ಕರ್ನಾಟಕ ರಾಜ್ಯ ಮುಕ್ತ ವಿವಿ, ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ, ಸುತ್ತೂರು ಶ್ರೀಮಠ, ರೋಟರಿ ಪಶ್ಚಿಮ ಸೇರಿದಂತೆ ೧೫೦ಕ್ಕೂ ಹೆಚ್ಚು ಸಂಘ, ಸಂಸ್ಥೆಗಳ ಗೌರವಕ್ಕೆ ಭಾಜನರಾಗಿದ್ದಾರೆ.

ಮೈಸೂರು ಚಾಮರಾಜನಗರ ರಾಜಕೀಯ ಇತಿಹಾಸ’,‘ಅನ್ನದಾತರ ಆತ್ಮಕಥೆಸೇರಿದಂತೆ ೨೫ ಕೃತಿಗಳನ್ನು ಪ್ರಕಟಿಸಿದ್ದಾರೆ.  ೫೦ಕ್ಕೂ ಹೆಚ್ಚು ಬೇರೆ ಬೇರೆ ಕೃತಿಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ಇದಲ್ಲದೇ ಈವರೆಗೆ ಸುಮಾರು ಐದು ಸಾವಿರಕ್ಕೂ ಹೆಚ್ಚು  ಲೇಖನಗಳನ್ನು ಬರೆದಿದ್ದಾರೆ.