ಭಾರತ್ ಬಂದ್ ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಣೆ

Promotion

ಬೆಂಗಳೂರು, ಸೆಪ್ಟೆಂಬರ್ 26, 2021 (www.justkannada.in): ನಾಳೆ (ಸೆ.27)ರಂದು ಕರೆ ನೀಡಿರುವ ಭಾರತ್ ಬಂದ್ ಗೆ ಆಂಧ್ರ ಪ್ರದೇಶ ಸರ್ಕಾರ ಬೆಂಬಲ ಘೋಷಿಸಿದೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೋಮವಾರದ ಭಾರತ ಬಂದ್‌ಗೆ ಈಗಾಗಲೇ ಸಾಕಷ್ಟು ಸಂಘ-ಸಂಘಟನೆಗಳು ಬೆಂಬಲ ಘೋಷಿಸಿವೆ.

ಆಂಧ್ರ ಪ್ರದೇಶ ಸರ್ಕಾರ, ವೈಎಸ್‌ಆರ್ ಕಾಂಗ್ರೆಸ್ ಬಂದ್‌ಗೆ ಬೆಂಬಲ ನೀಡುತ್ತಿವೆ. ಸೆಪ್ಟೆಂಬರ್ 26ರ ಮಧ್ಯರಾತ್ರಿಯಿಂದ 27ರ ಸಂಜೆಯವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳೂ ರಸ್ತೆಗಿಳಿಯುವುದಿಲ್ಲ ಎಂದು ಆಂಧ್ರ ಪ್ರದೇಶದ ಮಾಹಿತಿ ಮತ್ತು ಸಾರಿಗೆ ಸಚಿವ ಪೆರ್ನಿ ವೆಂಕಟರಾಮಯ್ಯ ತಿಳಿಸಿದ್ದಾರೆ.

ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಕಾರ್ಮಿಕರೂ ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ವಿಶಾಖಪಟ್ಟಣ ಉಕ್ಕಿನ ಕಾರ್ಖಾನೆಯ ಖಾಸಗೀಕರಣವನ್ನು ವಿರೋಧಿಸುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

key words: Andhra Pradesh Government announces support for Bharat Bandh