ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ: ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ

Promotion

ಕೊಲ್ಕತ್ತಾ, ಜನವರಿ 03, 2020 (www.justkannada.in): ಸೌರವ್ ಗಂಗೂಲಿ ಅವರಿಗೆ ವೈದ್ಯರು ಆ್ಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಅಗತ್ಯ ಬಿದ್ದರೆ ಮತ್ತೊಂದು ಶಸ್ತ್ರ ಚಿಕಿತ್ಸೆ ನಡೆಸುವುದಾಗಿ ಹೇಳಿದ್ದಾರೆ.

ಲಘು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ಜಿಮ್ ಮಾಡುವಾಗ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಅವರನ್ನು ಕೋಲ್ಕೊತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಗೂಲಿಗೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು ನೆಗೆಟಿವ್ ವರದಿ ಬಂದಿದೆ ಎನ್ನಲಾಗಿದೆ.