ಮಾಜಿ ಸಿಎಂ ಸಿದ್ದರಾಮಯ್ಯಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ

Promotion

ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬುಧವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿದೆ.

ಈ ಹಿಂದೆ ಸಿದ್ದರಾಮಯ್ಯ ಅವರಿಗೆ ಹೃದಯ ಸಂಬಂಧಿ ಕಾಯಿಲೆಗಳಿದ್ದವು. ಆದರೆ ಉಪ ಚುನಾವಣೆ ಸೋಲಿನ ಬಳಿಕ ಬುಧವಾರ ಮತ್ತೆ ಎದೆನೋವು ಕಾಣಿಸಿಕೊಂಡಿತ್ತು. ಕುಟುಂಬದ ವೈದ್ಯರ ಸಲಹೆ ಮೇರೆಗೆ ಕೂಡಲೇ ಆಸ್ಪತ್ರೆಗೆ ಹಾಜರಾದರು.

ಸಿದ್ದರಾಯ್ಯಗೆ ಆಂಜಿಯೋಗ್ರಾಮ್ ನಡೆಸಿದ ವೈದ್ಯರು ಹೃದಯ ಸಂಬಂಧಿ ಸಮಸ್ಯೆ ಇರುವುದನ್ನು ಪತ್ತೆ ಹಚ್ಚಿದ್ದಾರೆ. ಹೀಗಾಗಿ ಕೂಡಲೇ ಸಿದ್ದರಾಮಯ್ಯಗೆ ಆಂಜಿಯೋ ಪ್ಲಾಸ್ಟಿ ನಡೆಸಲು ವೈದ್ಯರು ನಿರ್ಧರಿಸಿದರು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು ಇಂದು ಮಧ್ಯಾಹ್ನದೊಳಗೆ ಟಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ.