ಕಿಂಗ್ಸ್‌ ಇಲೆವನ್ ಪಂಜಾಬ್ ತಂಡಕ್ಕೆ ಅನಿಲ್ ಕುಂಬ್ಳೆ ಕೋಚ್

ಬೆಂಗಳೂರು, ಅಕ್ಟೋಬರ್ 12, 2019 (www.justkannada.in):ಅನಿಲ್ ಕುಂಬ್ಳೆ ಅವರನ್ನು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಆಡುವ ಕಿಂಗ್ಸ್‌ ಇಲೆವನ್ ಪಂಜಾಬ್ ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ.

ಕನ್ನಡಿಗ ಆಟಗಾರ ಸುನಿಲ್ ಜೋಶಿ ಅವರು ಸಹಾಯಕ ಕೋಚ್ ಮತ್ತು ಪ್ರತಿಭಾ ಶೋಧದ ಮುಖ್ಯಸ್ಥರಾಗಿ ವೆಸ್ಟ್ ಇಂಡೀಸ್‌ ನ ಕರ್ಟ್ನಿ ವಾಲ್ಶ್ ಅವರನ್ನು ನೇಮಕ ಮಾಡಲಾಗಿದೆ.

ದಕ್ಷಿಣ ಆಫ್ರಿಕಾದ ಜಾಂಟಿ ರೋಡ್ಸ್‌ ಫೀಲ್ಡಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಕನ್ನಡಿಗ ಅನಿಲ್ ಕುಂಬ್ಳೆ ಅವರು ಭಾರತ ತಂಡದ ನಾಯಕರಾಗಿದ್ದರು. ಎರಡು ವರ್ಷಗಳ ಹಿಂದೆ ಭಾರತ ತಂಡದ ಮುಖ್ಯ ಕೋಚ್ ಆಗಿದ್ದರು.