ಪಂಜಾಬ್ ಕಿಂಗ್ಸ್ ಕೋಚ್ ಸ್ಥಾನದಿಂದ ಅನಿಲ್ ಕುಂಬ್ಳೆ ಹೊರ ಬೀಳುವ ಸಾಧ್ಯತೆ

Promotion

ಬೆಂಗಳೂರು, ಆಗಸ್ಟ್ 19, 2022 (www.justkannada.in): ಪಂಜಾಬ್ ಕಿಂಗ್ಸ್ ತಂಡದ ಕೋಚ್ ಸ್ಥಾನದಿಂದ ಅನಿಲ್ ಕುಂಬ್ಳೆ ಹೊರ ಬೀಳುವ ಸಾಧ್ಯತೆ ಇದೆ.

ಪಂಜಾಬ್ ಕಿಂಗ್ಸ್ ತಂಡದ ಕೋಚ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಅನಿಲ್ ಕುಂಬ್ಳೆ ಅವರ ಅಧಿಕಾರ ಒಪ್ಪಂದದ ಅವಧಿ ಇದೇ ಸೆಪ್ಟೆಂಬರ್ ತಿಂಗಳಿನಲ್ಲಿ ಅಂತ್ಯಗೊಳ್ಳಲಿದೆ. ಜತೆಗೆ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಅನಿಲ್ ಕುಂಬ್ಳೆ ಅವರನ್ನು ಕೋಚ್ ಆಗಿ ಮುಂದುವರಿಸಲು ಇಚ್ಚಿಸುತ್ತಿಲ್ಲ ಎನ್ನಲಾಗುತ್ತಿದೆ.

ನೂತನ ಕೋಚ್ ಆಗಿ ಈ ಇಬ್ಬರಲ್ಲಿ ಒಬ್ಬರ ಆಯ್ಕೆ ಸಾಧ್ಯತೆ ಇದೆ. ಅನಿಲ್ ಕುಂಬ್ಳೆ ಅವಧಿ ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ಈಗಾಗಲೇ ನೂತನ ಕೋಚ್ ಹುಡುಕಾಟದಲ್ಲಿದೆ.

ಇಯಾನ್ ಮಾರ್ಗನ್ ಅಥವಾ ಟ್ರೆವರ್ ಬೇಲಿಸ್ ನೂತನ ಕೋಚ್ ಆಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ವರದಿಗಳ ಪ್ರಕಾರ ಈ ಇಬ್ಬರನ್ನು ಈಗಾಗಲೇ ಪಂಜಾಬ್ ಕಿಂಗ್ಸ್ ಸಂಪರ್ಕಿಸಿದೆ.

ಅನಿಲ್ ಕುಂಬ್ಳೆ ಕೋಚ್ ಆಗಿ ಪಂಜಾಬ್ ಕಿಂಗ್ಸ್ ತಂಡವನ್ನು 42 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ಪೈಕಿ ಕೇವಲ 19 ಪಂದ್ಯಗಳಲ್ಲಿ ಮಾತ್ರ ಪಂಜಾಬ್ ಕಿಂಗ್ಸ್ ಜಯ ಸಾಧಿಸಿದ್ದು, ಹೇಳಿಕೊಳ್ಳುವಂತಹ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ.