ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡುವ ಅನ್ನಭಾಗ್ಯ ಯೋಜನೆಗೆ ಚಾಲನೆ.

Promotion

ಬೆಂಗಳೂರು,ಜುಲೈ,10,2023(www.justkannada.in): ಅನ್ನಭಾಗ್ಯ ಯೋಜನೆಯಡಿ ಪಡಿತರದಾರರಿಗೆ ನೇರ ನಗದು ವರ್ಗಾವಣೆಗೆ ಸಿಎಂ ಸಿದ್ಧರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನ್ನಭಾಗ್ಯ ಯೋಜನೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಯಿತು. ಪಡಿತರದಾರರ ಖಾತೆಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ 170 ರೂ ಹಣವನ್ನ ವರ್ಗಾವಣೆ ಮಾಡಲಾಗುತ್ತಿದೆ.

ಇಂದು ಮೈಸೂರು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣ ವರ್ಗಾವಣೆಗೆ ಮಾಡಲಾಗುತ್ತಿದ್ದು ಬಳಿಕ ಹಂತ ಹಂತವಾಗಿ ಇಡೀ ರಾಜ್ಯದಾದ್ಯಂತ ಪಡಿತರದಾರರಿಗೆ ನಗದು ವರ್ಗಾವಣೆಯಾಗಲಿದೆ.

5 ಗ್ಯಾರಂಟಿಗಳಲ್ಲಿ 3ನೇ ಗ್ಯಾರಂಟಿ ಅನ್ನಭಾಗ್ಯ ಜಾರಿಗೆ ತಂದಿದ್ದೇವೆ  . ಅನ್ನಭಾಗ್ಯ ಫಲಾನುಭವಿಗಳ ಖಾತೆಗೆ ನೇರ  ಹಣ ವರ್ಗಾವಣೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಈ ವೇಳೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸೇರಿ ಹಲವರು ಉಪಸ್ಥಿತರಿದ್ದರು.

Key words: Annabhagya Yojana – money  – 5 kg –rice-CM-Siddaramaiah