ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ ಕುರಿತು ಘೋಷಣೆ- ಶಾಸಕ ಎನ್. ಮಹೇಶ್

Promotion

 

ಚಾಮರಾಜನಗರ,ಜುಲೈ,30,2021(www.justkannada.in): ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ ಕುರಿತು ಘೋಷಣೆ ಮಾಡುವುದಾಗಿ ಕೊಳ್ಳೆಗಾಲ ಬಿಎಸ್ ಪಿ ಶಾಸಕ ಎನ್. ಮಹೇಶ್ ತಿಳಿಸಿದ್ದಾರೆ.

ಇಂದು ಗುಂಡ್ಲುಪೇಟೆಗೆ ಭೇಟಿ ನೀಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಎನ್. ಮಹೇಶ್, ಯಡಿಯೂರಪ್ಪ ಆಹ್ವಾನ ಹಿನ್ನೆಲೆ  ಶೀಘ್ರದಲ್ಲೇ ಬಿಜೆಪಿಗೆ ಸೇರಲು ನಿರ್ಧಾರ ಮಾಡಿದ್ದೇನೆ. ಯಾವುದೇ ಷರತ್ತು ಇಲ್ಲದೆ ಬಿಜೆಪಿಗೆ ಸೇರ್ಪಡೆಗೆ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಎನ್ ಮಹೇಶ್ ಅವರು ಬಿಎಸ್ ಪಿಯಿಂದ ಉಚ್ಛಾಟನೆಗೊಂಡಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು. ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Key words: Announcement – BJP- joining- soon-kollegal-MLA-N. Mahesh