ಮಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಗೋಡೆ ಬರಹ ಪತ್ತೆ

Promotion

ಮಂಗಳೂರು, ನವೆಂಬರ್ 29, 2020 (www.justkannada.in): ಮಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಬರಹ ಪತ್ತೆಯಾಗಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ.

ಇತ್ತೀಚೆಗೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾಗಿತ್ತು. ಕೋರ್ಟ್ ರಸ್ತೆಯಲ್ಲಿರುವ ಪೊಲೀಸ್ ಲೇಔಟ್ ಪೋಸ್ಟ್ ಕಟ್ಟಡದ ಮೇಲೆ ಕಿಡಿಗೇಡಿಗಳು ಉರ್ದು ಭಾಷೆಯಲ್ಲಿ ವಿವಾದಾತ್ಮಕ ಬರಹ ಬರೆದಿದ್ದಾರೆ.

ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ. ತಲೆ ದೇಹದಿಂದ ಬೇರ್ಪಡಿಸುವುದು ಎಂಬ ಅರ್ಥದಲ್ಲಿ ಬರೆದಿದ್ದಾರೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.