ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ.

Promotion

ಬೆಂಗಳೂರು,ನವೆಂಬರ್,1,2023(www.justkannada.in):  ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಪದೇ ಪದೇ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇದ್ದು ಇದೀಗ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.

ನಗರದ ಗಂಗಮ್ಮನಗುಡಿ ಈ ಘಟನೆ ಸಂಭವಿಸಿದೆ. ಸ್ಪಾಂಜ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಪಾಂಜ್ ತ್ಯಾಜ್ಯಕ್ಕೆ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿದೆ.

ಸ್ಥಳಕ್ಕೆ  ಮೂರು ಅಗ್ನಿಶಾಮಕ ದಳ ವಾಹನ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಿದ್ದಾರೆ.ಕಳೆದ  ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ  ಗ್ಯಾರೇಜ್ ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಗಳಿಗೆ ಬೆಂಕಿ ತಗುಲಿ 19 ಬಸ್ ಗಳು ಬೆಂಕಿಗಾಹುತಿಯಾಗಿದ್ದವು.

Key words: Another -fire -accident – Bangalore