ಬೆಂಗಳೂರಿನಲ್ಲಿ ಕೊರೋನಾಗೆ ಮತ್ತೊಂದು ಬಲಿ….

Another -victim - Corona - Bangalore.
Promotion

ಬೆಂಗಳೂರು,ಜೂ,10,2020(www.justkannada.in):  ರಾಜ್ಯದಲ್ಲಿ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನಲ್ಲಿ 50 ವರ್ಷದ ಕೊರೋನಾದಿಂದ ಮೃತಪಟ್ಟಿದ್ದಾರೆ.Another -victim - Corona - Bangalore.

ಬೆಂಗಳೂರಿನ ಪಾದರಾಯನಪುರ ನಿವಾಸಿ ಕೊರೋನಾ ವೈರಸ್ ನಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಈ ಮೂಲಕ ರಾಜ್ಯದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 67ಕ್ಕೆ ಏರಿಕೆಯಾಗಿದೆ.

ಮೃತ ಸೋಂಕಿತ ವ್ಯಕ್ತಿ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ನಿನ್ನೆ ವ್ಯಕ್ತಿಯ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ವ್ಯಕ್ತಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ನಡುವೆ ಇಂದೇ ವ್ಯಕ್ತಿ ಮೃತಪಟ್ಟಿದ್ದಾರೆ.

Key words: Another -victim – Corona – Bangalore.