ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ.

Promotion

ಕೊಡಗು,ಫೆಬ್ರವರಿ,13,2023(www.justkannada.in): ಕೊಡಗಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.

ಕೊಡಗು ಜಿಲ್ಲೆ ಪೊನ್ನಂಪೇಟೆಯ ನಾಲ್ಕೇರಿಯಲ್ಲಿ ಈ ಘಟನೆ ನಡೆದಿದೆ. ರಾಜು(60) ಹುಲಿದಾಳಿಗೆ ಬಲಿಯಾದ ವ್ಯಕ್ತಿ.  ಮೈಸೂರು ಜಿಲ್ಲೆ ಕೊಳವಿಗೆ ಹಾಡಿ ನಿವಾಸಿ ರಾಜು ನಾಲ್ಕೇರಿ ಗ್ರಾಮದಲ್ಲಿ ಪೂಣಚ್ಚ ಎಂಬುವವರ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹುಲಿ ದಾಳಿ ನಡೆಸಿದ್ದು ರಾಜು ಮೃತಪಟ್ಟಿದ್ದಾರೆ.

ನಿನ್ನೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದ ಬಳಿ ಮನೆ ಮುಂದೆ ಆಟವಾಡುತ್ತಿದ್ದ ಚೇತನ್  ಎಂಬ ಬಾಲಕನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿತ್ತು. ಈ ನಡುವೆ ನರ ಭಕ್ಷ ಹುಲಿಯನ್ನ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Another- victim –tiger- attack -Kodagu.