ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ-ಗೃಹ ಸಚಿವ ಡಾ. ಜಿ.ಪರಮೇಶ್ವರ್.  

Promotion

ಮಂಗಳೂರು,ಜೂನ್,6,2023(www.justkannada.in):  ‘ನೈತಿಕ ಪೊಲೀಸ್​ಗಿರಿ ತಡೆಗಾಗಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ’ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಆ್ಯಂಟಿ ಕಮ್ಯುನಲ್ ವಿಂಗ್​ನಲ್ಲಿ ಸಮರ್ಥ ಅಧಿಕಾರಿಗಳು ಇರಲಿದ್ದಾರೆ.ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್​ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಗಟ್ಟದಿದ್ದರೇ ಇಲಾಖೆ, ರಾಜ್ಯಕ್ಕೆ ಕೆಟ್ಟ ಹೆಸರು. ಅದ್ದರಿಂದ ನೈತಿಕ ಪೊಲೀಸ್ ​ಗಿರಿ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಆಗಸ್ಟ್ 15ರೊಳಗೆ ಕರಾವಳಿ ಭಾಗ ಡ್ರಗ್ಸ್ ಮುಕ್ತ ಪ್ರದೇಶವಾಗಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದರು.

ಕರಾವಳಿ ಭಾಗದಲ್ಲಿ ಒಳ್ಳೆಯ ಜನರು ಇದ್ದಾರೆ ಅಂತಾ ನಂಬಿದ್ದೇವೆ. ಈ ಭಾಗದಲ್ಲಿ ಭಯದ ವಾತಾವರಣವಿದೆ ಎಂದು ಜನ ಮಾತಾಡ್ತಿದ್ದಾರೆ. ಕೋಮು ಸೌಹಾರ್ದತೆಯನ್ನು ತರಲು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

Key words:  anti-communal -wing  -Home Minister -Dr. G. Parameshwar.