ಹಿಂದೂ ವಿರೋಧಿ ಹೇಳಿಕೆ ಪ್ರಕರಣ: ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ.

Promotion

ಬೆಂಗಳೂರು,ಮಾರ್ಚ್,21,2023(www.justkannada.in):  ಹಿಂದೂ ವಿರೋಧಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ಅವರಿಗೆ 14 ದಿನಗಳ ಕಾಲ  ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ಅವರ ವಿರುದ್ಧ ಹಿಂದೂಪರ ಸಂಘಟನೆಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದವು.  ಕೇಸ್ ದಾಖಲಿಸಿಕೊಂಡಿದ್ದ ಶೇಷಾದ್ರಿಪುರಂ ಠಾಣಾ ಪೊಲೀಸರು ನಟ ಚೇತನ್ ರನ್ನ ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.

ಇದೀಗ ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 32ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಇನ್ನು ನಟ ಚೇತನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

Key words: Anti-Hindu- statement -case: Actor- Chetan – judicial custody -14 days.