ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳಿಗೆ ಅರ್ಜಿ ಆಹ್ವಾನ.

ಬೆಂಗಳೂರು,ಡಿಸೆಂಬರ್,15,2022(www.justkannada.in):  ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅಧಿಸೂಚನೆ  ಹೊರಡಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಆನ್‌ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹುದ್ದೆಗಳ ವಿವರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1(ಯುಜಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯವ್ಯಾಪಿ ಮಿಕ್ಕುಳಿದ ವೃಂದ 265 ಮತ್ತು  ಕಲ್ಯಾಣ ಕರ್ನಾಟಕ ವೃಂದ 45 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ವೃಂದವಾರು ಮತ್ತು ಪ್ರವರ್ಗವಾರು ಹುದ್ದೆಗಳ ವಿವರಗಳನ್ನು ಒಳಗೊಂಡ ಸರ್ಕಾರದ ಅಧಿಸೂಚನೆ ಸಂಖ್ಯೆ ಇಡಿ 121 ಡಿಸಿಇ 2018 ದಿನಾಂಕ 21,03,2022 ನ್ನು ಪ್ರಾಧಿಕಾರದ ವೆಬ್‌ ಸೈಟಿನಲ್ಲಿ ಪ್ರಕಟಿಸಲಾಗಿದೆ.

ಪದಾವಧಿ ಮತ್ತು ಪಿಂಚಣಿ ಸೌಲಭ್ಯ : ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರು ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು, 2020 ರಲ್ಲಿ ನಿಗದಿಪಡಿಸಿದಂತೆ ಇರುತ್ತದೆ.

ಶುಲ್ಕ: ಅರ್ಜಿ ಸಲ್ಲಿಸಿ ಪೂರ್ಣಗೊಂಡ ನಂತರ ನಿಗದಿತ ಶುಲ್ಕದ ಚಲನ್‌ ನ್ನು ಪ್ರಾಧಿಕಾರದ ಅಂತರ್ಜಾಲದಿಂದ ಡೌನ್ಲೋಡ್ ಮಾಡಿ, ಶುಲ್ಕ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ನಿಗದಿತ ಶುಲ್ಕವನ್ನು ಪಾವತಿಸಬೇಕು. ಶುಲ್ಕವನ್ನು ಕಂಪ್ಯೂಟರೈಸ್ಟ್ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ, ಪ್ರವರ್ಗ 2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ರೂ. 5 ಸಾವಿರ ಶುಲ್ಕವಿರುತ್ತದೆ.  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ/ಪ್ರವರ್ಗ-1 ಅಂಗವಿಕಲ ಅಭ್ಯರ್ಥಿಗಳಿಗೆ  ಶುಲ್ಕ ವಿನಾಯಿತಿ ಇರುತ್ತದೆ(ರೂ.2500 ಪ್ರಕ್ರಿಯೆ ಶುಲ್ಕ ಕಡ್ಡಾಯ)

ಅರ್ಜಿ ಸಲ್ಲಿಸುವ ವಿಧಾನ:

ಪ್ರಾಧಿಕಾರದ ವೆಬ್‌ ಸೈಟ್ http://kea.kar.nic.in ನಲ್ಲಿ ತೋರಿಸಿರುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್‌ ಲೈನ್‌ ಮುಖಾಂತರ ಅರ್ಜಿಯನ್ನು ಭರ್ತಿಮಾಡಬೇಕು. ಪೆನ್ ಮತ್ತು ಪೇಪರ್ ಉಪಯೋಗಿಸಿ ಅರ್ಜಿಯನ್ನು ಸಲ್ಲಿಸುವ ವಿಧಾನ ಇರುವುದಿಲ್ಲ.

ಆನ್‌ ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 16.12.2022

ಆನ್‌ ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.01.2023

ಇ-ಪೋಸ್ಟ್ ಆಫೀಸ್‌ ನಲ್ಲಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ: 17.01.2023

 ಅರ್ಹತೆ: ಪ್ರಾಂಶುಪಾಲರು ಗ್ರೇಡ್-1 (ಯು.ಜಿ): ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಕಾಲೇಜು ಶಿಕ್ಷಣ ಇಲಾಖೆ) (ಪ್ರಾಂಶುಪಾಲರ ಹುದ್ದೆಗಳ ನೇಮಕಾತಿ) (ಸ್ನಾತಕ ಶಿಕ್ಷಣ) (ವಿಶೇಷ) ನಿಯಮಗಳು, 2020ರ ನಿಯಮ 3 ರಲ್ಲಿ ನಿಗದಿಪಡಿಸಿದಂತೆ ಇರಬೇಕು.

Key words: Applications – invited – Principal Grade-1 -Vacancies – Government -First –grade-Colleges.