ಶಾಶ್ವತ ಡೀನ್ ನೇಮಕ ಮತ್ತು ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹ: ಕಾವಾ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರತಿಭಟನೆ…

Promotion

ಮೈಸೂರು,ಡಿ,30,2019(www.justkannada.in): ಶಾಶ್ವತ ಡೀನ್ ನೇಮೀಸುವಂತೆ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಕಾವಾ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಆಡಳಿತ ಕಛೇರಿಗೆ ಬೀಗ ಜಡಿದು, ತರಗತಿ ಬಹಿಷ್ಕರಿಸಿ ಯಾವುದೇ ಗದ್ದಲವಿಲ್ಲದೆ ಕಾವಾ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.  ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಮತ್ತು  ಶಾಶ್ವತ ಡೀನ್ ನೇಮಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು. ಪ್ರಸ್ತುತ ADC ಪೂರ್ಣಿಮಾ ಅವರು ಡೀನ್ ಆಗಿ ಕರ್ತರ್ವ್ಯ ನಿರ್ವಹಿಸುತ್ತಿದ್ದಾರೆ.

ವಿದ್ಯುತ್ ಬಿಲ್ ಬಾಕಿ ಇರುವ ಕಾರಣ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ. ನೀರು, ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ  ಹೀಗಾಗಿ ವಿದ್ಯಾರ್ಥಿಗಳು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದ್ದಾರೆ. ಇನ್ನು ಪ್ರತಿಭಟನೆ ನಡೆಸದಂತೆ ಪೊಲೀಸರು ವಿದ್ಯಾರ್ಥಿಗಳ ಮನವೊಲಿಸಿದರು.

Kety words: appoint  permanent- dean  Protest –cava College -students -mysore