ಸಿಎಂ ಹೆಚ್ಚುವರಿ ಕಾರ್ಯದರ್ಶಿ, ಆಪ್ತಕಾರ್ಯದರ್ಶಿ,  ಎಜಿ ಹಾಗೂ ಸಿಎಂ ಮಾಧ್ಯಮ ಸಲಹೆಗಾರರ ನೇಮಿಸಿ ಆದೇಶ.  

Promotion

ಬೆಂಗಳೂರು,ಮೇ,22,2023(www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭಾ ಅಧಿವೇಶನ ನಡೆಯುತ್ತಿದೆ. ಈ ನಡುವೆ ಸಿಎಂ ಹೆಚ್ಚುವರಿ ಕಾರ್ಯದರ್ಶಿ, ಆಪ್ತಕಾರ್ಯದರ್ಶಿ,  ಎಜಿ ಹಾಗೂ ಸಿಎಂ ಮಾಧ್ಯಮ ಸಲಹೆಗಾರರನ್ನ ನೇಮಿಸಿ ಆದೇಶ ಹೊರಡಿಸಲಾಗಿದೆ.

ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅವರನ್ನು ನೇಮಕಗೊಳಿಸಿ ರಾಜ್ಯಸರ್ಕಾರ ಆದೇಶಿಸಿದೆ. ಗೃಹ ಇಲಾಖೆ ಜೊತೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಹಾಗೆಯೇ  ಶಶಿಕಿರಣ್ ಶೆಟ್ಟಿ ಅವರನ್ನು ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಳಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಸಿಎಂ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ನೇಮಕ ಮಾಡಲಾಗಿದೆ.  ಇನ್ನು ಸಿಎಂ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ.  ಹಾಗೆಯೇ ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ.

Key words: appointing -CM-Additional Secretary -Private Secretary, AG – Media Adviser