ರಾಜ್ಯದ 6 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ…

ಬೆಂಗಳೂರು,ಮೇ,2,2021(www.justkannada.in):  ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ.jk

ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಎಸ್-3) ಮಾಲತಿ ಸಿ ಅಧಿಸೂಚನೆ ಹೊರಡಿಸಿದ್ದು, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.appointment-district-minister-in-charge-6-districts-state

6 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಇಲ್ಲಿದೆ.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ – ಬೆಳಗಾವಿ

ಸಚಿವ ಉಮೇಶ್ ಕತ್ತಿ – ಬಾಗಲಕೋಟೆ

ಸಚಿವ ಅರವಿಂದ ಲಿಂಬಾವಳಿ – ಬೀದರ್

ಸಚಿವ ಎಂಟಿಬಿ ನಾಗರಾಜ್ – ಕೋಲಾರ

ಸಚಿವ ಮುರುಗೇಶ್ ನಿರಾಣಿ – ಕಲಬುರ್ಗಿ

ಸಚಿವ ಎಸ್ ಅಂಗಾರ – ಚಿಕ್ಕಮಗಳೂರು

Key words: Appointment – District -Minister -in charge – 6 Districts – State.