ಹಿಂದೂಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಪಂಚಮಸಾಲಿ ಮೀಸಲಾತಿ ಬಗ್ಗೆ ಸೂಕ್ತ ಕ್ರಮ- ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಸೆಪ್ಟಂಬರ್, 24,2021(www.justkannada.in): ಹಿಂದೂಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ ಪಂಚಮಸಾಲಿ ಮೀಸಲಾತಿ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸಭೆಯಲ್ಲಿ ಇಂದು ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಪಂಚಮಸಾಲಿ ಸಮುದಾಯವನ್ನ 3ಬಿ ಯಿಂದ 2ಎಗೆ ವರ್ಗಾವಣೆ ಮಾಡಲು ಕೇಳಿದ್ದಾರೆ. ಈ ಬಗ್ಗೆ ಒಬಿಸಿ ಆಯೋಗಕ್ಕೆ  ವರ್ಗಾವಣೆ ಮಾಡಲಾಗಿದೆ. ಶಿಕ್ಷಣ, ಉದ್ಯೋಗ ಸ್ಥಿತಿಗತಿಗಳ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಆಯೋಗ ಮಾಹಿತಿ ಸಂಗ್ರಹ ಮಾಡುತ್ತಿದೆ. ಸಂಪೂರ್ಣ ಮಾಹಿತಿ ಸಂಗ್ರಹಣೆ ಅವಶ್ಯಕತೆ ಇದೆ. ಇಂದಿರಾ ಸಹಾನಿ ವರದಿ ಪ್ರಕಾರ ಕೆಲಸ ನಡೆಯುತ್ತಿದೆ. ಇತರ 15 ಸಮುದಾಯಗಳು 2ಎಗೆ ಬರಲು ಬೇಡಿಕೆ ಇಟ್ಟಿವೆ. ವರದಿ ಬಂದ ಬಳಿಕ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿಂದುಳಿದ ವರ್ಗದ ವರದಿ ಬರಬೇಕಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ. ಮಹಾರಾಷ್ಟ್ರದಲ್ಲಿ‌ ಮರಾಠ ಮೀಸಲಾತಿ ಸುಪ್ರೀಂ ಕೋರ್ಟ್ ತಳ್ಳಿ ಹಾಕಿದೆ. ಅಲ್ಲದೆ ಹಲವು ಸಮುದಾಯಗಳು ಮೀಸಲಾತಿ ಕೇಳುತ್ತಿವೆ. ಹಾಗಾಗಿ ಹಿಂದೂಳಿದ ವರ್ಗಗಳ ಆಯೋಗದ ವರದಿ ಬಂದ ಬಳಿಕ. ಸೂಕ್ತ ಕ್ರಮವನ್ನು ಪಂಚಮಸಾಲಿ ಮೀಸಲಾತಿ ಬಗ್ಗೆ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಉತ್ತರಿಸಿದರು.

ಸಿಎಂ ಉತ್ತರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದರು.

Key words: Appropriate -action – Panchamasaali- reservation -CM -Basavaraja Bommai.