ಪಿಎಫ್ ಐ ಬ್ಯಾನ್ ಕೇಂದ್ರದ ಸೂಕ್ತ ಕ್ರಮ: ಪೊಲೀಸ್ ಇಲಾಖೆಯಿಂದ ಅಲರ್ಟ್- ಗೃಹ ಸಚಿವ ಅರಗ ಜ್ಞಾನೇಂದ್ರ.

ಬೆಂಗಳೂರು,ಸೆಪ್ಟಂಬರ್,28,2022(www.justkannada.in): ದುಷ್ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್​ಐ ಮತ್ತು ಅದರ ಅಂಗಸಂಸ್ಥೆಗಳ ವಿರುದ್ಧ ಕೇಂದ್ರ ಸರ್ಕಾರವು ಸೂಕ್ತ ಕ್ರಮ ಕೈಗೊಂಡಿದೆ. ಪಿಎಫ್ ಐ ನಿಷೇಧ ಹಿನ್ನೆಲೆ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ: ಯಾವುದೇ ರೀತಿ ಕೃತ್ಯ ನಡೆಯಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪಿಎಫ್ ಐ ಬ್ಯಾನ್ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಪಿಎಫ್ ಐ ಬ್ಯಾನ್ ಮಾಡಿದ್ದನ್ನ ಸ್ವಾಗತಿಸುವೆ. ಈ ಸಂಘಟನೆಗಳ ಬಗ್ಗೆ ಕೇಂದ್ರ ಸರ್ಕಾರವು ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದೆ. ದೇಶದ ಏಕತೆ, ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಇದು ಮಹತ್ವದ ಕ್ರಮ ಎಂದು  ತಿಳಿಸಿದರು.

ಎನ್‌ಐಎ ಮತ್ತು ಕರ್ನಾಟಕ ಪೊಲೀಸರು ಈ ಮೊದಲೇ ಪಿಎಫ್​ ಐ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಿ‌ ಸಾಕ್ಷ್ಯ ಸಂಗ್ರಹಿಸಿದ್ದರು. ಮತಾಂಧ ಶಕ್ತಿಗಳು ದೇಶದ ವಿರುದ್ಧ ಯುವಕರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದವು. ಈ ಸಂಘಟನೆಗಳನ್ನು ಬ್ಯಾನ್ ಮಾಡುವ ಮೂಲಕ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗಲಿದೆ ಎಂದು  ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

Key words: Appropriate -action – PFI -Ban -Centre- Home Ministe-r Araga Gnanendra.