ತ್ರಿಬಲ್ ಮರ್ಡರ್ ಮಾಡಿದ್ಧ ಆರೋಪಿಗಳ ಬಂಧನ: ಪೊಲೀಸರ ಕಾರ್ಯಾಚರಣೆಗೆ ಸಚಿವ ನಾರಾಯಣಗೌಡರಿಂದ ಶ್ಲಾಘನೆ…

Promotion

ಮಂಡ್ಯ, ಸೆಪ್ಟಂನರ್, 14,2020(www.justkannada.in): ಮಂಡ್ಯದ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಅರ್ಚಕರು ಸೇರಿ ಮೂವರನ್ನ ಕೊಲೆ ಮಾಡಿದ್ದ ಆರೋಪಿಗಳನ್ನ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದ ಪೊಲೀಸರ ಬಗ್ಗೆ ಸಚಿವ ನಾರಾಯಣಗೌಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.jk-logo-justkannada-logo

ಇತ್ತೀಚೆಗೆ ಮಂಡ್ಯದ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ದರೋಡೆ ಮಾಡಿದ್ದ ಆರೋಪಿಗಳು ದೇವಾಲಯದಲ್ಲಿದ್ದ ಅರ್ಚಕರು ಸೇರಿ ಮೂವರನ್ನ ಹತ್ಯೆಗೈದು ಪರಾರಿಯಾಗಿದ್ದರು. ಆರೋಪಿಗಳ ಪತ್ತೆಗೆ ರಚನೆ ಮಾಡಿದ್ದ ಗ್ರಾಮಾಂತರ ಪೋಲೀಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ.ಮಹೇಶ್ ಹಾಗೂ ಪೂರ್ವ ಪೋಲೀಸ್ ಠಾಣೆಯ ಪಿ.ಎಸ್.ಐ ಶರತ್ ಕುಮಾರ್ ನೇತೃತ್ವ ತಂಡಕ್ಕೆ ಆರೋಪಿಗಳು ಸಿಕ್ಕಿದ್ದಾರೆ. ಮದ್ದೂರು ತಾಲ್ಲೂಕಿನ ಸಾದೊಳಲು ಗೇಟ್ ಬಳಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಪ್ರದೇಶದ ವಿಜಿ , ತೊಪ್ಪನಹಳ್ಳಿ ಗ್ರಾಮದ ಮಂಜ, ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಬಂಧಿತ ಆರೋಪಿಗಳು. ಕಾರ್ಯಾಚರಣೆ ವೇಳೆ ಪೋಲೀಸ್ ಸಿಬ್ಬಂದಿಗಳ ಮೇಲೆ  ಮೂವರು ಆರೋಪಿಗಳು ಕಲ್ಲು ಮತ್ತು ಚಾಕುಗಳಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ.  ಬಳಿಕ ಎಚ್ಚೆತ್ತುಕೊಂಡ ಪೋಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರು ಆರೋಪಿಗಳು ಹಲ್ಲೆಗೆ ಮುಂದಾದ ವೇಳೆ ಕಾರ್ಯಾಚರಣೆ ಕೈಗೊಂಡ ಪೋಲೀಸರು 3 ಮಂದಿ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ  ಓಡಲು ಯತ್ನಿಸಿದವರನ್ನು ಬಂಧಿಸಿದ್ದಾರೆ.

ಕಾರ್ಯಚರಣೆ ವೇಳೆ ಪೂರ್ವ ಪೋಲೀಸ್ ಠಾಣೆಯ ಪಿಎಸ್ ಐ ಶರತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅನಿಲ್ ಕುಮಾರ್ ಕೃಷ್ಣ ಕುಮಾರ್ ಅವರು ತೀವ್ರವಾಗಿ ಗಾಯಗೊಂಡಿದ್ದು ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ 3 ಮಂದಿ ಆರೋಪಿಗಳನ್ನು ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.arrest-tribal-murder-accused-minister-narayana-gowda-appreciation-operation-police

ಇನ್ನು ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿ ಕಾರ್ಯಚರಣೆ ಕೈಗೊಂಡ ಪೋಲೀಸ್ ಸಿಬ್ಬಂದಿ ವರ್ಗದವರನ್ನು ಪ್ರಶಂಸಿಸಿದರು.

ಇನ್ನು ಕ್ಷಿಪ್ರಗತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯವನ್ನ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಶ್ಲಾಘಿಸಿದ್ದಾರೆ‌.

Key words: Arrest – Tribal –Murder- accused-Minister- Narayana Gowda – Appreciation- operation – police.