ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ.

kannada t-shirts

ಮಂಗಳೂರು,ಜನವರಿ,3,2023(www.justkannada.in):  ಖೋಟಾನೋಟು ಚಲಾವಣೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಬಿ.ಸಿ ರೋಡ್ ನಿವಾಸಿ ನಿಜಾಮುದ್ದೀನ್(32), ಮಂಗಳೂರಿನ ಜೆಪ್ಪು ನಿವಾಸಿ ರಜೀಮ್ (31) ಬಂಧಿತ ಆರೋಪಿಗಳು. ಬಂಧಿತರಿಂದ ರೂ. 500 ಮುಖಬೆಲೆಯ ರೂ. 4,50,000/- ಖೋಟಾ ನೋಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜನವರಿ 2 ರಂದು ಮಂಗಳೂರು ನಗರದ ನಂತೂರು ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿರುವ ಸಮಯ, ನಂತೂರು ಕಡೆಯಿಂದ ಬಂದ, ಒಂದು ಸ್ಕೂಟರ್ ನಲ್ಲಿ ಇಬ್ಬರು ಸವಾರರು ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡು, ಅತೀ ವೇಗವಾಗಿ ಚಲಾಯಿಸಿ, ಪೊಲೀಸರಿಂದ ತಪ್ಪಿಕೊಳ್ಳಲು ಪ್ರಯತ್ನಿಸಿದ್ದರು. ಈ ವೇಳೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ತಡೆದು ಪರಿಶೀಲಿಸಿ ಅವರ ವಶದಲ್ಲಿದ್ದ ರೂ. 500 ಮುಖಬೆಲೆಯ ರೂ. 4,50,000/- ಖೋಟಾ ನೋಟುಗಳನ್ನು ಪತ್ತೆ ಹಚ್ಚಿ, ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.  ಖೋಟು ನೋಟುಗಳನ್ನು ಬೆಂಗಳೂರಿನಿಂದ ಡ್ಯಾನಿಯಲ್ ಎಂಬಾತನಿಂದ ಪಡೆದು, ಅವುಗಳನ್ನು ಮಂಗಳೂರು ನಗರದಲ್ಲಿ ನೋಟುಗಳನ್ನು ಚಲಾವಣೆ ಮಾಡುವ ಬಗ್ಗೆ, ಆರೋಪಿಗಳು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ ಮಾಡಿದ ಸ್ಕೂಟರ್ ನಲ್ಲಿ ಅವುಗಳನ್ನು ಚಲಾವಣೆಗೆ ಕೊಂಡು ಹೋಗುತ್ತಿದ್ದ ಸಮಯದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.  ಆರೋಪಿ ನಿಜಾಮುದ್ಧೀನ್ ವಿರುದ್ಧ ವಿಟ್ಲ,ಕುಶಾಲನಗರ, ಪಂಡೇಶ್ವರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು.

ಪೊಲೀಸ್ ಆಯುಕ್ತರ,  ಉಪ-ಪೊಲೀಸ್ ಆಯುಕ್ತರುಗಳ ಮಾರ್ಗದರ್ಶನದಂತೆ ಸಹಾಯಕ ಪೊಲೀಸ್ ಆಯುಕ್ತ ಶ್ರೀ ಪಿ. ಎ. ಹೆಗ್ಡೆ  ನೇತೃತ್ವದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ನಿರೀಕ್ಷಕಅನಂತ ಪದ್ಮನಾಭ ಕೆ.ವಿ, ಪಿ,ಎಸ್,ಐ ಹಾಗೂ ಸಿಬ್ಬಂಧಿಯವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.

Key words: Arrest -two -accused – circulating –fake- notes-mangalore

website developers in mysore