ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್…

ಮೈಸೂರು,ಮಾರ್ಚ್,11,2021(www.justkannada.in): ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ.

ಮೈಸೂರು ಜಿಲ್ಲೆ ಸರಗೂರು ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಗ್ರಾಮಗಳಿಗೆ ಮಾರುತಿ ವ್ಯಾನ್ ಮೂಲಕ ಮದ್ಯ ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಅಪರ ಪೊಲೀಸ್ ಅಧೀಕ್ಷಕ ಶಿವಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಮದ್ಯ ಸಾಗಿಸುತ್ತಿದ್ದ ಇಬ್ಬರು ವ್ಯಾನ್ ಸಮೇತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.Arrest- two men -smuggled –liquor-mysore

1160 ಪೌಚ್ ಗಳಿರುವ 16 ಮದ್ಯದ ಬಾಕ್ಸ್ ಗಳು ಹಾಗೂ ಕಳ್ಳ ಸಾಗಣಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸರಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Arrest- two men -smuggled –liquor-mysore