ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ.

Promotion

ಬೆಂಗಳೂರು,ಮೇ,23,2022(www.justkannada.in):  ಕಾಲೇಜು ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮನೋರಂಜಿತ್ ಸೇರಿ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ.  ಇಬ್ಬರು ವಿದ್ಯಾರ್ಥಿಗಳು ಪ್ರತಿಷ್ಠಿತ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಐಷಾರಾಜಿ ಜೀವನಕ್ಕಾಗಿ  ಕಾಲೇಜುಗಳ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ ವಿವಿಧ ಬಗೆಯ ಡ್ರಗ್ಸ್ ಮೊಬೈಲ್, ಕಾರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.arrest-two- men- selling –marijuana-bangalore

ಗಿರಿನಗರ ಠಾಣಾ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ.

Key words: arrest – two -students – drugs