ವಿನಯ್ ಕುಲಕರ್ಣಿ ಬಂಧಿಸಿರುವುದು ಸಿಎಂ ಬಿಎಸ್ ವೈ ಮತ್ತು ಬಿಜೆಪಿಯ ರಾಜಕೀಯ ಪಿತೂರಿ-ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ

Promotion

ಬೆಂಗಳೂರು,ನವೆಂಬರ್,7,2020(www.justkannada.in): ಬಿಜೆಪಿ ಸರ್ಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ಹೊರಹಾಕಿದ್ದಾರೆ.jk-logo-justkannada-logo

ಈ ಕುರಿತು ಟ್ವೀಟ್ ಮಾಡಿರುವ ರಣದೀಪ್ ಸಿಂಗ್ ಸುರ್ಜೇವಾಲ, ಬಿಜೆಪಿ ಸರ್ಕಾರವು ಸಿಬಿಐ ಅನ್ನು ತನ್ನ ಕೈಗೊಂಬೆಯಾಗಿ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ವಿನಯ್ ಕುಲಕರ್ಣಿ ಅವರನ್ನು ಬಂಧಿಸಿರುವುದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆ ತಂತ್ರಗಳಿಗೆ ಎಂದಿಗೂ ಜಗ್ಗುವುದಿಲ್ಲ ಎಂಬುದನ್ನು ಯಡಿಯೂರಪ್ಪನವರು ಅರ್ಥಮಾಡಿಕೊಳ್ಳಬೇಕು.arrest-vinay-kulkarni-political-conspiracy-cm-bsy-bjp-ranjeep-singh-surjewala

ಅಸ್ಥಿರ ಯಡಿಯೂರಪ್ಪ ಸರ್ಕಾರವು ತನ್ನ ಮುಂಚೂಣಿ ಘಟಕಗಳಾದ ಸಿಬಿಐ & ಇಡಿ ಬಳಸಿಕೊಂಡು @DKShivakumar, @DrParameshwara, ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ. ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು ಎಂದು ಕಿಡಿಕಾರಿದ್ದಾರೆ.

Key words: arrest -Vinay Kulkarni – political conspiracy – CM BSY – BJP-Ranjeep Singh Surjewala