ನಿತ್ಯಾನಂದ ಸ್ವಾಮಿ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ…

Promotion

ರಾಮನಗರ,ಫೆ,19,2020(www.justkannada.in): ಅತ್ಯಾಚಾರ, ಬಾಲಕಿಯರ ಅಪಹರಣ ಸೇರಿದಂತೆ ಹಲವು  ಪ್ರಕರಣಗಳ ಆರೋಪ ಎದುರಿಸುತ್ತಿರುವ ಬಿಡದಿ ನಿತ್ಯಾನಂದ ಸ್ವಾಮಿ ವಿರುದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್​ ಜಾರಿ ಮಾಡಿದೆ.

ರಾಮನಗರ 3ನೇ ಜಿಲ್ಲಾ ಸತ್ರ ನ್ಯಾಯಾಲಯ ನಿತ್ಯಾನಂದ ಸ್ವಾಮಿ ವಿರುದ್ದ ಜಾಮೀನು ರಹಿತ ಬಂಧನ ವಾರೆಂಟ್​ ಹೊರಡಿಸಿದೆ. ಹೈಕೋರ್ಟ್‌ನಲ್ಲಿ ಜಾಮೀನು ರದ್ದುಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಈ ಆದೇಶ ಹೊರಡಿಸಿದ್ದು ಶೀಘ್ರದಲ್ಲಿ ನಿತ್ಯಾನಂದನನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ರಾಜ್ಯ ಪೊಲೀಸ್​ ಇಲಾಖೆಗೆ ನಿರ್ದೇಶನ ನೀಡಿದೆ.

ಅತ್ಯಾಚಾರ, ಬಾಲಕಿಯರ ಅಪರಹಣ ಆರೋಪ ಎದುರಿಸುತ್ತಿರುವ ನಿತ್ಯಾನಂದಸ್ವಾಮಿ ವಿದೇಶಕ್ಕೆ ಪರಾರಿಯಾಗಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

Key words:  Arrest warrant –issued- against- Nithyananda Swamy