ಅಕ್ರಮ ಚಿನ್ನ ಸಾಗಾಟಕ್ಕೆ ಯತ್ನ: ಆರೋಪಿ ಅರೆಸ್ಟ್…

Promotion

ಮಂಗಳೂರು,ಅಕ್ಟೋಬರ್,29,2020(www.justkannada.in): ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಅಬುಬಕರ್ ಸಿದ್ಧಿಕ್ ಬಂಧಿತ ಆರೋಪಿ.  ಬಂಧಿತನಿಂದ 32,96,300 ರೂ ಮೌಲ್ಯದ 614 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ್ದ. ಈ ವೇಳೆ ಮಂಗಳೂರು ಏರ್ ಪೋರ್ಟ್ ನಲ್ಲಿ ಆರೋಪಿ ಸಿಕ್ಕಿ ಬಿದ್ದಿದ್ದಾನೆ.arrested-attempting-smuggle-gold-mangalire-airport

ದಕ್ಷಿಣ ಕನ್ನಡ ಜಿಲ್ಲೆಯವನಾದ ಅಬುಬಕ್ಕರ್ ಸಿದ್ದಿಕ್  ದುಬೈನಿಂದ ಮಂಗಳೂರಿಗೆ ಬಂದಿದ್ದು ಆತ ಚಿನ್ನ ಸಾಗಿಸುತ್ತಿರುವುದು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ವೇಳೆ  ತಿಳಿದು ಬಂದಿದೆ. 32.96 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Key words: Arrested – attempting – smuggle gold –mangalire -airport